Kundapra.com ಕುಂದಾಪ್ರ ಡಾಟ್ ಕಾಂ

ಶುಭದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ
ಬೈಂದೂರು: ಶುಭದಾ ಆಂಗ್ಲ ಮಾಧ್ಯಮ ಶಾಲೆ ಕಿರಿಮಂಜೇಶ್ವರದಲ್ಲಿ ವಿಶ್ವ ಯೋಗ ದಿನಾಚರಣೆಯ ಕಾರ್ಯಕ್ರಮ ಜರುಗಿತು.

ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಶಶಿಕಲಾ ಬಿಜೂರು ಅವರು ಮಾತನಾಡಿ ಯೋಗ ಎಂದರೆ ಬರೀ ಆಸನಗಳಲ್ಲ, ಆಸನ, ಪ್ರಾಣಾಯಾಮ, ಪ್ರತ್ಯಾಹಾರ, ಧಾರಣ, ಧ್ಯಾನ ಸಮಾಧಿ, ಇವುಗಳನ್ನೊಳಗೊಂಡಿದ್ದು. ಮಾನಸಿಕ ನೆಮ್ಮದಿ ಮತ್ತು ಮನುಷ್ಯನ ಏಕಾಗ್ರತೆಗೆ ಯೋಗ ಅಗತ್ಯ. ವೆಚ್ಚವಿಲ್ಲದ ವೈದ್ಯ ಯೋಗವಾಗಿದೆ. ಒತ್ತಡ ನಿರ್ವಹಣೆಯಲ್ಲಿ ಯೋಗ ಪ್ರಮುಖ ಪಾತ್ರವಹಿಸುತ್ತದೆ ಹಾಗೂ ಮಾನಸಿಕ ಮತ್ತು ದೈಹಿಕ ಸಮತೋಲನಕ್ಕೆ ಯೋಗ ಮನೆ ಮದ್ದು ಎಂದು ಹೇಳಿದರು.

ಇನ್ನೋರ್ವ ಅತಿಥಿ ತಿಮ್ಮೇಶ್ ಬಿ ಎನ್, ಠಾಣಾಧಿಕಾರಿ ಬೈಂದೂರು ಇವರು ಯೋಗದ ಮಹತ್ವವನ್ನು ಉದಾಹರಣೆಗಳೊಂದಿಗೆ ತಿಳಿಸಿದರು. ಮುಖ್ಯ ಶಿಕ್ಷಕ ರವಿದಾಸ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕರು, ಚುನಾಯಿತ ವಿದ್ಯಾರ್ಥಿ ಪ್ರತಿನಿಧಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕು| ಶ್ರೀನಿಧಿ ಸ್ವಾಗತಿಸಿದರು, ಕು| ಮೇಘನಾ ಎಲ್. ಕಾರ್ಯಕ್ರಮ ನಿರೂಪಿಸಿದರು. ಮೇಘನಾ ಜಿ. ವಂದಿಸಿದರು.

 

Exit mobile version