Kundapra.com ಕುಂದಾಪ್ರ ಡಾಟ್ ಕಾಂ

ಮೇಲ್‌ಗಂಗೊಳ್ಳಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ
ಗಂಗೊಳ್ಳಿ : ಮೇಲ್‌ಗಂಗೊಳ್ಳಿಯ ಸರಕಾರಿ ಕಿರಿಯ ಪ್ರಾಥಮಿಕ (ಹವೇ) ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮ ಜರುಗಿತು.

ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯೋಗದ ಬಗ್ಗೆ ಮಾಹಿತಿ ನೀಡಿ ಮಾತನಾಡಿದ ಹಿರಿಯ ಯೋಗಪಟು ಜಿ.ಗಣಪತಿ ಶಿಪಾ ಅವರು ಯೋಗವು ವ್ಯಕ್ತಿಯೊಬ್ಬನ ಒಳಗಿನ ಶಕ್ತಿಯನ್ನು ಒಂದು ಸಂಚಲಿತ ರೀತಿಯಲ್ಲಿ ಸುಧಾರಿಸಲು ಅಥವಾ ಅಭಿವೃದ್ಧಿಪಡಿಸಲು ಇರುವ ಒಂದು ವಿಧಾನ. ಅದು ಸಂಪೂರ್ಣ ಸ್ವಸಾಫಲ್ಯ ಪಡೆಯುವ ಒಂದು ಹಾದಿಯನ್ನು ಒದಗಿಸುತ್ತದೆ ಎಂದು ಹೇಳಿದರು.

ಶಾಲೆಯ ಮುಖ್ಯ ಶಿಕ್ಷಕ ರಮೇಶ ಮಹಾಲೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಎಸ್‌ಡಿಎಂಸಿ ಉಪಾಧ್ಯಕ್ಷ ನಾಗರಾಜ ಜಿ.ಎಂ., ನಿವೃತ್ತ ಬ್ಯಾಂಕ್ ಉದ್ಯೋಗಿ ಈಶ್ವರ ಜಿ., ಅಂಗನವಾಡಿ ಶಿಕ್ಷಕಿ ಸಹನಾ, ಅಂಗನವಾಡಿ ಸಹಾಯಕಿಯರು, ಪೋಷಕರು ಉಪಸ್ಥಿತರಿದ್ದರು.

ಶಾಲೆಯ ಸಹಶಿಕ್ಷಕಿ ಲಲಿತಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

 

Exit mobile version