Site icon Kundapra.com ಕುಂದಾಪ್ರ ಡಾಟ್ ಕಾಂ

ಉಡುಪಿ ಜಿಲ್ಗಾ ಕಾಂಗ್ರೆಸ್‌ ಐ.ಟಿ.ಸೆಲ್ ಅಧ್ಯಕ್ಷರಾಗಿ ಸತೀಶ್ ಪೂಜಾರಿ ನೇಮಕ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:  ಉಡುಪಿ ಜಿಲ್ಲಾ ಕಾಂಗ್ರೆಸ್‌ ನ ಮಾಹಿತಿ ತಂತ್ರಜ್ಞಾನ ವಿಭಾಗದ ಅಧ್ಯಕ್ಷರಾಗಿ ಸತೀಶ್ ಪೂಜಾರಿ ಕಲತ್ರಪಾದೆ ಇವರು ನೇಮಕಗೊಂಡಿದ್ದಾರೆ.

ಇವರು ಈ ಹಿಂದೆ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್‌ ಉಪಾಧ್ಯಕ್ಷರಾಗಿ ಹಾಗೂ ಕಾರ್ಕಳ ಬ್ಲಾಕ್‌ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿ ಕೋಮುವಾದವನ್ನು ಬಲವಾಗಿ ವಿರೋದಿಸಿ ತಮ್ಮ ನೇರ ಬರವಣಿಗೆಯ ಮೂಲಕ ಗುರುತಿಸಿಕೊಂಡಿರುವ ಸತೀಶ್ ಪೂಜಾರಿ ಇವರನ್ನು ರಾಜ್ಯ ಕಾಂಗ್ರೆಸ್ ಐ.ಟಿ.ಸೆಲ್ ಅಧ್ಯಕ್ಷ ನಿರಂಜನ್ ರಾವ್ ಅವರು ಉಡುಪಿ ಜಿಲ್ಲೆಯ ಕಾಂಗ್ರೆಸ್ ಐ.ಟಿ. ಸೆಲ್ ನ ಅಧ್ಯಕ್ಷರಾಗಿ ನಿಯುಕ್ತಿಗೊಳಿಸಿದ ಪತ್ರವನ್ನು ಹಸ್ತಾಂತರಿಸಿದರು.

ಈ ಸಂಧರ್ಭದಲ್ಲಿ ರಾಜ್ಯ ಯುವ ಕಾಂಗ್ರೆಸ್‌ ಪ್ರದಾನ ಕಾರ್ಯದರ್ಶಿ ರವಿಶಂಕರ್ ಶೇರಿಗಾರ್, ಕಾರ್ಕಳ ಬ್ಲಾಕ್‌ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಸದಾಶಿವ ದೇವಾಡಿಗ ಉಪಸ್ಥಿತರಿದ್ದರು.

 

 

Exit mobile version