ಕುಂದಾಪ್ರ ಡಾಟ್ ಕಾಂ ಸುದ್ದಿ
ಗಂಗೊಳ್ಳಿ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಗಂಗೊಳ್ಳಿ ಖಾರ್ವಿಕೇರಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಠಾರ ಸಂಪೂರ್ಣವಾಗಿ ಜಲಾವೃತಗೊಂಡಿದೆ.
ಶಾಲೆಯ ಸುತ್ತಲೂ ನೀರು ತುಂಬಿಕೊಂಡಿರುವುದರಿಂದ ಮಕ್ಕಳು ಶಾಲೆಗೆ ಬರಲು ತೊಂದರೆಯಾಗುತ್ತಿದೆ. ಶಾಲಾ ವಠಾರ ತಗ್ಗು ಪ್ರದೇಶವಾಗಿರುವುದರಿಂದ ಮಳೆ ನೀರು ಈ ಪರಿಸರದಲ್ಲಿ ಸಂಗ್ರಹಗೊಳ್ಳುತ್ತಿದೆ. ಕಳೆದ ಕೆಲವು ದಿನಗಳ ಹಿಂದೆ ಖಾರ್ವಿಕೇರಿ ಪ್ರದೇಶದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಿಸಲಾಗಿದ್ದು, ಮಳೆ ನೀರು ಹರಿದು ಹೋಗಲು ಸೂಕ್ತ ಚರಂಡಿ ವ್ಯವಸ್ಥೆ ಮಾಡದಿರುವುದರಿಂದ ಮಳೆ ನೀರು ನಿಂತುಕೊಳ್ಳಲಾರಂಭಿಸದೆ.
ಶಾಲಾ ವಠಾರದಲ್ಲಿ ಮಳೆ ನೀರು ನಿಂತು ಮಕ್ಕಳಿಗೆ ತೊಂದರೆಯಾಗುತ್ತಿದ್ದರೂ ಸ್ಥಳೀಯಾಡಳಿತ ಈವರೆಗೆ ಯಾವುದೇ ಕ್ರಮಕೈಗೊಳ್ಳದಿರುವುದು ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ. ಆದಷ್ಟು ಶೀಘ್ರ ಮಳೆ ನೀರು ಹರಿದು ಹೋಗಲು ಚರಂಡಿ ವ್ಯವಸ್ಥೆ ಮಾಡುವಂತೆ ಪೋಷಕರು ಆಗ್ರಹಿಸಿದ್ದಾರೆ.

