ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬೈಂದೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಹಾಗೂ ಬೈಂದೂರು ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಬೈಂದೂರು ಕಾಂಗ್ರೆಸ್ ಕಛೇರಿಯಲ್ಲಿ ರಕ್ಷಾಬಂಧನ ಕಾರ್ಯಕ್ರಮ ಜರುಗಿತು.
ಬೈಂದೂರು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಅವರಿಗೆ ರಾಖಿ ಕಟ್ಟುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭ ಬೈಂದೂರು ವಿಧಾನಸಭಾ ಕ್ಷೇತ್ರ ಪ್ರಚಾರ ಸಮಿತಿ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮದನಕುಮಾರ್ ಉಪ್ಪುಂದ, ಕಾರ್ಯದರ್ಶಿ ನಾಗರಾಜ ಗಾಣಿಗ ಬಂಕೇಶ್ವರ, ಮುಖಂಡ ಎಸ್. ರಾಜು ಪೂಜಾರಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೌರಿ ದೇವಾಡಿಗ, ತಾಲೂಕು ಪಂಚಾಯತ್ ಸದಸ್ಯೆ ಗ್ರೀಷ್ಮಾ ಭಿಡೆ, ಯುವ ಕಾಂಗ್ರೆಸ್ ಅಧ್ಯಕ್ಷ ಶೇಖರ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.
ಮಹಿಳಾ ಕಾಂಗ್ರೆಸ್ ಸದಸ್ಯರು ಬೈಂದೂರು ಪೊಲೀಸ್ ಠಾಣೆಗೆ ತೆರಳಿ ಪೊಲೀಸರಿಗೆ ರಾಖಿ ಶುಭಹಾರೈಸಿದರು.