ಕುಂದಾಪ್ರ ಡಾಟ್ ಕಾಂ ಸುದ್ದಿ
ಬೈಂದೂರು: ನೂತನವಾಗಿ ಅಸ್ತಿತ್ವಕ್ಕೆ ಬಂದ ಬೈಂದೂರು ತಾಲೂಕಿನಲ್ಲಿ ಬೈಂದೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಆರಂಭಗೊಳ್ಳುತ್ತಿದ್ದು, ಅ.೩೧ರ ಶುಕ್ರವಾರ ಬೆಳಿಗ್ಗೆ ೧೦:೩೦ಕ್ಕೆ ಬೈಂದೂರು ರೋಟರಿ ಸಮುದಾಯ ಭವನದಲ್ಲಿ ಉದ್ಘಾಟನೆಗೊಳ್ಳಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗಣೇಶಪ್ರಸಾದ್ ಪಾಂಡೇಲು ವಹಿಸಿಕೊಳ್ಳಲಿದ್ದಾರೆ. ಬೈಂದೂರು ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಸಂಘದ ಉದ್ಘಾಟನೆ ನೆರವೇರಿಸಲಿದ್ದು, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಶಿಧರ ಹೆಮ್ಮಾಡಿ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಸಂತೋಷ್ ಸರಳೆಬೆಟ್ಟು ಅತಿಥಿಗಳಾಗಿ ಉಪಸ್ಥಿತರಿರಲಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.
► ಬೈಂದೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಜನಾರ್ದನ ಮರವಂತೆ – https://kundapraa.com/?p=29630 .