Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು ವಲಯ ಮಟ್ಟದ ಪ್ರತಿಭಾ ಕಾರಂಜಿಗೆ ಚಾಲನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಶಿಕ್ಷಣ ಇಲಾಖೆ ವಿವಿಧ ಹಂತಗಳಲ್ಲಿ ನಡೆಸುತ್ತಿರುವ ವಾರ್ಷಿಕ ಪ್ರತಿಭಾ ಕಾರಂಜಿ ಮಕ್ಕಳ ಪ್ರತಿಭೆಯನ್ನು ಒರೆಗೆ ಹಚ್ಚಿ, ಬೆಳಕಿಗೆ ತಂದು ಬೆಳೆಸುವ ಉತ್ತಮ ಕಾರ್ಯಕ್ರಮ. ಅದರಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಧೈರ್ಯ, ಸ್ಥೈರ್ಯ, ಧೀಮಂತಿಕೆ ಬೆಳಸಿಕೊಳ್ಳುತ್ತಾರೆ ಎಂದು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಹೇಳಿದರು.

ನಾವುಂದದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಆಯೋಜಿಸಿದ್ದ ಬೈಂದೂರು ವಲಯ ಮಟ್ಟದ ಎರಡು ದಿನಗಳ ಪ್ರತಿಭಾ ಕಾರಂಜಿ ಉದ್ಘಾಟಿಸಿ ಮಾತನಾಡಿದರು.

ವಲಯದ ೧೮೦ ಶಾಲೆಗಳ ೧೫೦೦ ವಿದ್ಯಾರ್ಥಿಳು ಎರಡು ಸ್ಪರ್ಧಾ ಹಂತಗಳನ್ನು ದಾಟಿಬಂದು ಭಾಗವಹಿಸುವ ಈ ಕಾರ್ಯಕ್ರಮ ಕ್ಷೇತ್ರದ ನಿಜವಾದ ಪ್ರತಿಭಾ ಸಂಗಮ. ಈ ಮಕ್ಕಳು ಪ್ರಮಾಣಿಕ, ಕರ್ತವ್ಯನಿಷ್ಠ ಅಧ್ಯಾಪಕರ ಕೈಯಲ್ಲಿ ಸಂಸ್ಕೃತಿ ಮತ್ತು ಸಂಸ್ಕಾರ ರೂಢಿಸಿಕೊಳ್ಳಬಹುದು. ಆ ನಿಟ್ಟಿನಲಿ ಅವರಿಗೆ ಮಾರ್ಗದರ್ಶನ ದೊರೆಯಲಿ ಎಂದು ಅವರು ಆಶಿಸಿದರು.

ಜಿಲ್ಲಾ ಪಂಚಾಯಿತಿ ಸದಸ್ಯೆ ಗೌರಿ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ಶಾಲೆಯ ಮುಖ್ಯೋಪಾಧ್ಯಾಯ ಆನಂದ ಜಿ ಸ್ವಾಗತಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಒ. ಆರ್. ಪ್ರಕಾಶ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕ್ಷೇತ್ರ ಸಮನ್ವಯಾಧಿಕಾರಿ ಅಬ್ದುಲ್ ರವೂಫ್ ವಂದಿಸಿದರು. ಸಮೂಹ ಸಂಪನ್ಮೂಲ ವ್ಯಕ್ತಿ ಸುನಿಲ್ ಶೆಟ್ಟಿ ಮತ್ತು ಕ್ಷೇತ್ರ ಸಂಪನ್ಮೂಲ ವ್ಯಕಿ ಕರುಣಾಕರ ಶೆಟ್ಟಿ ನಿರೂಪಿಸಿದರು.

ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ, ಸದಸ್ಯ ಶಂಕರ ಪೂಜಾರಿ, ತಾಲ್ಲೂಕು ಪಂಚಾಯಿತಿ ಸದಸ್ಯರಾದ ಶಾಮಲಾ ಎಸ್. ಕುಂದರ್, ಮಹೇಂದ್ರ ಪೂಜಾರಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ನರಸಿಂಹ ದೇವಾಡಿಗ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಗಾಣಿಗ, ಪ್ರತಿಭಾ ಕಾರಂಜಿ ನೋಡಲ್ ವ್ಯಕ್ತಿ ಸುಧಾಕರ ದೇವಾಡಿಗ, ದಾನಿ ಅಂದೂಕಾ ಸಾಹೇಬ್, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಮೋದ ಪೂಜಾರಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿಶ್ವನಾಥ ಪೂಜಾರಿ, ವಿವಿಧ ಶಿಕ್ಷಕ ಸಂಘಗಳ ಅಧ್ಯಕ್ಷರು ಇದ್ದರು.

Exit mobile version