Kundapra.com ಕುಂದಾಪ್ರ ಡಾಟ್ ಕಾಂ

ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್‌ಗೆ ರಾಜ್ಯ ಸಂಯುಕ್ತ ಸಹಕಾರಿ ಅಧ್ಯಕ್ಷರ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬೈಂದೂರು ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್‌ನ ಪ್ರಧಾನ ಕಛೇರಿಗೆ ಕರ್ನಾಟಕ ರಾಜ್ಯ ಸಂಯುಕ್ತ ಸಹಕಾರಿ ನಿ. ಬೆಂಗಳೂರು ಇದರ ಅಧ್ಯಕ್ಷ ಬಿ. ಹೆಚ್. ಕೃಷ್ಣಾರೆಡ್ಡಿ ಭೇಟಿ ನೀಡಿದರು.

ಬಳಿಕ ಮಾತನಾಡಿದ ಅವರು ಗ್ರಾಮೀಣ ಭಾಗದಲ್ಲಿ ಸಹಕಾರಿ ಸಂಸ್ಥೆಗಳು ಆರ್ಥಿಕ ವ್ಯವಹಾರವನ್ನು ಯಶಸ್ವಿಯಾಗಿ ನಡೆಸುತ್ತಿದ್ದು ಸಮಾಜದ ಆರ್ಥಿಕ ವ್ಯವಸ್ಥೆ ಬಲಗೊಳಿಸಲು ತನ್ನದೇ ಆದ ಕೊಡುಗೆ ನೀಡುತ್ತಿದೆ. ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡಿರುವ ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಿರುವುದು ಶ್ಲಾಘನೀಯ ಎಂದರು.

ಶ್ರೀರಾಮ ಕ್ರೆಡಿಟ್ ಕೋ ಆಪರೇಟಿವ್‌ನ ಅಧ್ಯಕ್ಷ ಎಸ್. ರಾಜು ಪೂಜಾರಿ ಅವರು ಬಿ. ಹೆಚ್. ಕೃಷ್ಣಾರೆಡ್ಡಿಯವರನ್ನು ಗೌರವಿಸಿದರು. ಈ ಸಂದರ್ಭ ಸೌಹಾರ್ದ ಸಹಕಾರಿಗಳ ಅಭಿವೃದ್ಧಿ ಅಧಿಕಾರಿ ಗುರುಪ್ರಸಾದ್, ಜಿಲ್ಲಾ ಒಕ್ಕೂಟದ ಮುಖ್ಯಾಧಿಕಾರಿ ಭುವನೇಶ್, ಸಂಘದ ನಿರ್ದೇಶಕ ಶಿವರಾಮ ಪೂಜಾರಿ ಹಾಗೂ ಸಿಬ್ಬಂಧಿ ಮಣಿಕಂಠ ಇದ್ದರು.

 

Exit mobile version