Kundapra.com ಕುಂದಾಪ್ರ ಡಾಟ್ ಕಾಂ

ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ – ಮುದ್ದುಕೃಷ್ಣ ಸ್ಪರ್ಧೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಬನ್ನಾಡಿಯ ಉಪ್ಲಾಡಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಶ್ರೀ ಗೋಪಾಲಕೃಷ್ಣನಿಗೆ ವಿಶೇಷ ಪೂಜೆ ನೆರವೇರಿಸುವುದರೊಂದಿಗೆ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಕ್ರೀಡಾ ಕೂಟಗಳನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಆಯೋಜಿಸಿತ್ತು.

ಉಡುಪಿಯ ನಾಗರಾಜ ಶೇಟ್ ಮತ್ತು ಬಳಗದವರಿಂದ ಭಕ್ತಿ ಲಹರಿ ಹಾಗೂ ವಡ್ಡರ್ಸೆ ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ನಡೆಯಿತು. ವರ್ಷಂಪ್ರತಿಯಂತೆ ಈ ವರ್ಷವೂ ಕೂಡಾ 6 ವರ್ಷದೊಳಗಿನ ಪುಟಾಣಿ ಮಕ್ಕಳಿಗೆ ಮುದ್ದುಕೃಷ್ಣ ಸ್ಪರ್ಧೆ ಏರ್ಪಡಿಸಲಾಗಿತ್ತು.

ಅಧ್ಯಾಪಕಿ ವಿದ್ಯಾ ಹೇರ್ಳೆ ಗಿಳಿಯಾರು, ನಿವೃತ್ತ ಅಧ್ಯಾಪಕರಾದ ಯಾಳಕ್ಲು ನಾರಾಯಣ ಶೆಟ್ಟಿ ಮತ್ತು ನಿವೃತ್ತ ಮುಖ್ಯೋಪಾಧ್ಯಾಯರಾದ ವಡ್ಡರ್ಸೆ ಬಾಲಕೃಷ್ಣ ಶೆಟ್ಟಿಯವರು ಸ್ಪರ್ಧೆಯ ತೀರ್ಪುಗಾರರಾಗಿದ್ದರು.

ವಿಟ್ಲಪಿಂಡಿಯ ದಿನ ಶ್ರೀ ಗೋಪಾಲಕೃಷ್ಣನ ಪುರ ಮೆರವಣಿಗೆಯನ್ನು ವಿಜೃಂಭಣೆಯಿಂದ ಏರ್ಪಡಿಸಲಾಯ್ತು.

ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಬನ್ನಾಡಿ ಸೋಮನಾಥ ಹೆಗ್ಡೆ, ಹಿಂದಿನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಬಿ.ಭೋಜ ಹೆಗ್ಡೆ, ಕಾರ್ಯದರ್ಶಿ ಯು.ವಸಂತ ಶೆಟ್ಟಿ, ಪ್ರಧಾನ ಅರ್ಚಕರಾದ ಶ್ರೀ ಯು.ಮಂಜುನಾಥ ಭಟ್, ಸದಸ್ಯರಾದ ಯು.ವೆಂಕಟರಮಣ ಭಟ್, ದಿನೇಶ, ಗೌರಿ ನಾರ‍್ತಿ, ಲತಾ ಪಿ.ಶೆಟ್ಟಿ, ನರಸಿಂಹ ಮರಕಾಲ, ಪ್ರಭಾಕರ ಮುಂತಾದವರು ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.

Exit mobile version