Site icon Kundapra.com ಕುಂದಾಪ್ರ ಡಾಟ್ ಕಾಂ

ವಾಲಿಬಾಲ್ ಪಂದ್ಯಾಟ: ಕುವೆಂಪು ತೆಕ್ಕಟ್ಟೆ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ತೆಕ್ಕಟ್ಟೆ ಕುವೆಂಪು ಮಾದರಿ ಶಾಲೆಯಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಅತಿಥೇಯ ಕುವೆಂಪು ಶತಮಾನೋತ್ಸವ ಮಾದರಿ ಶಾಲೆ, ತೆಕ್ಕಟ್ಟೆ ಪ್ರಥಮ ಸ್ಥಾನಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದು, ಜಿಲ್ಲಾಮಟ್ಟದಲ್ಲಿ ದ್ವಿತೀಯ ಸ್ಥಾನಗಳಿಸಿದೆ. ಶಾಲೆಯ ವಿದ್ಯಾರ್ಥಿಗಳಾದ ಪ್ರಶಾಂತ, ಆದಿತ್ಯ, ಅಂಜನ್, ಪ್ರೀತಮ್ ಮತ್ತು ಸನ್ನಿಧಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ಮಲ್ಯಾಡಿ ಸದಾರಾಮ ಶೆಟ್ಟಿ ತರಬೇತಿ ನೀಡಿದ್ದಾರೆ.

ಚಿತ್ರದಲ್ಲಿ ಮುಖ್ಯೋಪಾಧ್ಯಾಯಿನಿ ಲಲಿತಾ ಸಖಾರಾಮ್, ಶಿಕ್ಷಕರಾದ ವೇಣುಗೋಪಾಲ ಹೆಗ್ಡೆ, ಸದಾನಂದ ಶೆಟ್ಟಿ, ಸೀತಾಲಕ್ಷ್ಮಿ, ಪಾರ್ವತಿ ಮುದ್ದೋಡಿ ಮತ್ತು ದೈಹಿಕ ಶಿಕ್ಷಣ ಶಿಕ್ಷಕ ಸದಾರಾಮ ಶೆಟ್ಟಿ ಉಪಸ್ಥಿತರಿದ್ದರು.

Exit mobile version