Kundapra.com ಕುಂದಾಪ್ರ ಡಾಟ್ ಕಾಂ

ಖ್ಯಾತ ಪ್ರಸಂಗಕರ್ತ ಪ್ರಸಾದ್ ಮೊಗೆಬೆಟ್ಟು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಪ್ರಸಂಗಕರ್ತ, ಯಕ್ಷಗಾನ ಭಾಗವತ ಎಂ. ಎಚ್. ಪ್ರಸಾದ್ ಮೊಗೆಬೆಟ್ಟು ಅವರಿಗೆ ಈ ಭಾರಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ದೊರೆತಿದೆ.

ಮೊಗೆಬೆಟ್ಟು ಅವರು ಕಳೆದ 25 ವರ್ಷಗಳಿಂದ ಯಕ್ಷಗಾನ ಕಲಾಸೇವೆಯಲ್ಲಿ ತೊಡಗಿಕೊಂಡಿದ್ದಾರೆ. ರಾಜ್ಯ, ಹೊರರಾಜ್ಯ, ಅಲ್ಲದೇ ವಿದೇಶದಲ್ಲಿಯೂ ಸಹ ಯಕ್ಷಗಾನ ಕಾರ್ಯಕ್ರಮಗನ್ನು ನೀಡಿರುವ ಹೆಗ್ಗಳಿಕೆ ಅವರದ್ದು. ಈವರೆಗೆ 23 ಯಕ್ಷಗಾನ ಪ್ರಸಂಗವನ್ನು ರಚಿಸಿ ಖ್ಯಾತಿಗಳಿಸಿದ್ದಾರೆ. 2003ರಲ್ಲಿ ಸಾಂಪ್ರದಾಯಿಕ ಭಾಗವತಿಕೆ ಕಲಿಕೆಗೆ ಕೇಂದ್ರ ಸರಕಾರದಿಂದ ಸಂಸ್ಕೃತಿ ಅಕಾಡೆಮಿಯ ಸ್ಕಾಲರ್‌ಶಿಪ್ ಪಡೆದಿದ್ದಾರೆ. 50ಕ್ಕೂ ಹೆಚ್ಚು ಯಕ್ಷಗಾನ ತಾಳಮದ್ದಲೆ ಕಾರ್ಯಕ್ರಮ ನೀಡಿ ಎ ಗ್ರೇಡ್ ಮಾನ್ಯತೆಯನ್ನು ಪಡೆದಿದ್ದಾರೆ.

 

Exit mobile version