ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಯಕ್ಷಗಾನ ಭಾಗವತ ಹೆರಂಜಾಲು ಗೋಪಾಲ ಗಾಣಿಗರಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸಂದಿದೆ.
೧೯೮೪ರಲ್ಲಿ ಯಕ್ಷಗಾನ ವೃತ್ತಿಪರ ಮೇಳದಲ್ಲಿ ಕಲಾವಿದರಾಗಿ ಯಕ್ಷಗಾನ ಕಲೆಯಲ್ಲಿ ತೊಡಗಿಸಿಕೊಂಡ ಹೆರಂಜಾಲು ಗೋಪಾಲ ಗಾಣಿಗರು ಖ್ಯಾತ ಯಕ್ಷಗಾನ ಕಲಾವಿದ ದಿ. ಹೆರಂಜಾಲು ವೆಂಕಟರಮಣ ಗಾಣಿಗ ಪುತ್ರ. ನಾಲ್ಕನೇ ತರಗತಿಯೇ ವಿದ್ಯಾಭ್ಯಾಸ ಮೊಟಕುಗೊಳಿಸಿ ಕಲಾ ಸೇವೆಯಲ್ಲಿ ತೊಡಗಿಸಿಕೊಂಡವರು.
ಹೆರಂಜಾಲಿನಲ್ಲಿ ಯಕ್ಷಗಾನ ಪ್ರತಿಷ್ಠಾನವನ್ನು ಸ್ಥಾಪಿಸಿ ಆಸಕ್ತ ವಿದ್ಯಾರ್ಥಿಗಳಿಗೆ ಯಕ್ಷಗಾನ ಕಲೆಯ ತರಭೇತಿ ನೀಡುತ್ತಿದ್ದಾರೆ.
