Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ ಪಂಚಾಯತ್ ಬಿಜೆಪಿ ತೆಕ್ಕೆಗೆ. ಕಾಂಗ್ರೆಸ್ 6 ಹಾಗೂ ಎಸ್‌ಡಿಪಿಐಗೆ 4 ಸ್ಥಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಗಂಗೊಳ್ಳಿ ಗ್ರಾಮ ಪಂಚಾಯತ್‌ನಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಹಾಗೂ ಎಸ್‌ಡಿಪಿಐ ಬೆಂಬಲಿತ ಅಭ್ಯರ್ಥಿಗಳ ನಡುವಿನ ಹಣಾಹಣಿಯಲ್ಲಿ ಅಂತಿಮವಾಗಿ ಬಿಜೆಪಿ ಅಧಿಕಾರ ಹಿಡಿಯಲು ಯಶಸ್ವಿಯಾಗಿದೆ.

ಒಟ್ಟು 33 ಸ್ಥಾನಗಳ ಪೈಕಿ ಬಿಜೆಪಿ 23, ಕಾಂಗ್ರೆಸ್ 6 ಹಾಗೂ ಎಸ್‌ಡಿಪಿಐ 4 ಸ್ಥಾನಗಳನ್ನು ಪಡೆದುಕೊಂಡಿದೆ. ಈ ಹಿಂದಿನ ಚುನಾವಣೆಯಲ್ಲಿ ಬಿಜೆಪಿ 19 ಕಾಂಗ್ರೆಸ್ 14 ಸ್ಥಾನ ಪಡೆದಿತ್ತು.

ಕುಂದಾಪುರ ಮಿನಿ ವಿಧಾನಸೌಧದಲ್ಲಿ ಕುಂದಾಪುರ ತಹಶೀಲ್ದಾರರ ನೇತೃತ್ವದಲ್ಲಿ ಮತ ಎಣಿಕೆ ಕಾರ್ಯ ಸಸೂತ್ರವಾಗಿ ನಡೆಯಿತು. ವಿಜಯೋತ್ಸವದಲ್ಲಿ ಬೈಂದೂರು ಶಾಸಕ ಬಿ.ಎಂ ಸುಕುಮಾರ ಶೆಟ್ಟಿ, ಬಿಜೆಪಿ ಅಧ್ಯಕ್ಷ ಸದಾನಂದ ಉಪ್ಪಿನಕುದ್ರು ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

► ಪಂಚಾಯತ್ ಚುನಾವಣೆ: ಯಡ್ತರೆ ಕಾಂಗ್ರೆಸ್‌ಗೆ, ಬೈಂದೂರು ಬಿಜೆಪಿ ತೆಕ್ಕೆಗೆ – https://kundapraa.com/?p=30722 .

Exit mobile version