Kundapra.com ಕುಂದಾಪ್ರ ಡಾಟ್ ಕಾಂ

ಸುರಭಿ ಜೈಸಿರಿ ಆಮಂತ್ರಣ ಪತ್ರಿಕೆ ಬಿಡುಗಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಸಾಂಸ್ಕೃತಿಕ ರಂಗದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಸುರಭಿ ಸಂಸ್ಥೆ, ನೃತ್ಯ, ಕಲೆ, ಸಂಗೀತ, ರಂಗಭೂಮಿ ಮೊದಲಾದ ಕ್ಷೇತ್ರಗಳಲ್ಲಿ ಅವಿರತವಾಗಿ ತೊಡಗಿಕೊಂಡು ಜನರ ಅಭಿರುಚಿಯನ್ನು ಉನ್ನತೀಕರಿಸಿದೆ ಎಂದು ಪತ್ರಕರ್ತ ಎಸ್. ಜನಾರ್ದನ ಮರವಂತೆ ನುಡಿದರು.

 

ಅವರು 19ನೇ ವರ್ಷದ ಸಂಭ್ರಮದಲ್ಲಿರುವ ಬೈಂದೂರಿನ ಸಾಂಸ್ಕೃತಿಕ ಸೇವಾ ಪ್ರತಿಷ್ಠಾನ ‘ಸುರಭಿ ರಿ. ಬೈಂದೂರು’ ಸಂಸ್ಥೆಯ ಆಶ್ರಯದಲ್ಲಿ ದಿ. 23, 24 ಹಾಗೂ 25 ಜನವರಿ 2018ರಂದು ಮೂರು ದಿನಗಳ ಕಾಲ ಇಲ್ಲಿನ ಶಾರದಾ ವೇದಿಕೆಯಲ್ಲಿ ಜರುಗಲಿರುವ ಸುರಭಿ ಜೈಸಿರಿ ಹಾಗೂ ಬಿಂದುಶ್ರೀ ಪ್ರಶಸ್ತಿ ಪ್ರದಾನ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದರು.

ಈ ಸಂದರ್ಭ ಸುರಭಿ ರಿ. ಬೈಂದೂರು ಅಧ್ಯಕ್ಷ ಸತ್ಯನಾ ಕೊಡೇರಿ, ಕಾರ್ಯದರ್ಶಿ ರಾಮಕೃಷ್ಣ ಉಪ್ಪುಂದ, ಉಪಾಧ್ಯಕ್ಷ ಆನಂದ ಮದ್ದೋಡಿ, ಸಂಘಟನಾ ಕಾರ್ಯದರ್ಶಿ ಲಕ್ಷ್ಮಣ ವೈ. ಕೊರಗ, ನಿರ್ದೇಶಕ ಸುಧಾಕರ ಪಿ. ಬೈಂದೂರು ಇದ್ದರು.

Exit mobile version