ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕಾಲೇಜಿನ ಮೈದಾನದಲ್ಲಿ ಮಂಗಳೂರು ವಿ.ವಿ. ವ್ಯಾಪ್ತಿಯ ಅಂತರ್ ಕಾಲೇಜು ಕ್ರೀಡಾಳುಗಳ ಪುರುಷರ ನೆಟ್‌ಬಾಲ್ ಆಯ್ಕೆ ಶಿಬಿರ ನಡೆಯಿತು.
ಪೂರ್ವಾಭಾವಿಯಾಗಿ ನಡೆದ ಸಭೆಯಲ್ಲಿ ಕಾಲೇಜಿನ ನಿರ್ದೇಶಕರಾದ ಪ್ರೊ. ದೋಮ ಚಂದ್ರಶೇಖರ್, ಮಂಗಳೂರು ವಿ.ವಿ.ಯ ದೈಹಿಕ ಶಿಕ್ಷಣ ವಿಭಾಗದ ಸಹಾಯಕ ನಿರ್ದೇಶಕ ಡಾ. ರಮೇಶ್, ಕಾಲೇಜಿನ ಪ್ರಭಾರ ಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ, ಆಯ್ಕೆ ತಂಡದ ಸದಸ್ಯರಾದ ಪ್ರೇಮನಾಥ ಶೆಟ್ಟಿ, ಉಜಿರೆ ಎಸ್.ಡಿ.ಎಮ್. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಸುದಿನ, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರಂಜಿತ್ ಟಿ.ಎನ್. ಉಪಸ್ಥಿತರಿದ್ದರು. ಮಂಗಳೂರು ವಿ.ವಿ. ವ್ಯಾಪ್ತಿಯ ವಿವಿಧ ಕಾಲೇಜುಗಳ ೭೦ ವಿದ್ಯಾರ್ಥಿಗಳು ಶಿಬಿರದಲ್ಲಿ ಭಾಗವಹಿಸಿದ್ದರು.