ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕುಂದಾಪುರದ ಕಾಲೇಜು ರಸ್ತೆಯಲ್ಲಿ ರಾಜಾರೋಷವಾಗಿ ಹೊಡೆದಾಟಕ್ಕೆ ನಿಂತು ಮಾರಾಮಾರಿಗೆ ಕಾರಣವಾಗಿದ್ದ ಪ್ರಕರಣ ಸಂಬಂಧ ತಲೆಮರೆಸಿಕೊಂಡಿದ್ದ ವಿದ್ಯಾರ್ಥಿಗಳ ಪೈಕಿ ಓರ್ವನನ್ನು ಬಂಧಿಸಿರುವ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬೈಂದೂರು ತಾಲೂಕು ಕಿರಿಮಂಜೇಶ್ವರ ನಿವಾಸಿ ಸುಬ್ರಹ್ಮಣ್ಯ ಶೆಟ್ಟಿ (19) ಬಂಧಿತ ಆರೋಪಿ.
ಹಾಡುಹಗಲೇ ವಿದ್ಯಾರ್ಥಿಗಳ ರೌಡಿಸಂನನನು ಗಂಭೀರವಾಗಿ ಪರಿಗಣಿಸಿದ ಕುಂದಾಪುರ ಎಸ್ಐ ಹರೀಶ್ ಆರ್. ನಾಯ್ಕ್ ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿದ್ದರು. ಸಿಬ್ಬಂಧಿಗಳಾದ ಚೇತನ್ ಹಾಗೂ ಪ್ರಸನ್ನ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುವ ವೇಳೆ ಆತ ತಪ್ಪೊಪ್ಪಿಕೊಂಡಿದ್ದಾರೆ.
ಇದನ್ನು ಓದಿ
► ಕುಂದಾಪುರ: ನಡುರಸ್ತೆಯಲ್ಲಿ ಕಾಲೇಜು ವಿದ್ಯಾರ್ಥಿಗಳ ಮಾರಾಮಾರಿ – https://kundapraa.com/?p=30986 .
Video