Kundapra.com ಕುಂದಾಪ್ರ ಡಾಟ್ ಕಾಂ

ಯಡ್ತರೆ ಗ್ರಾ.ಪಂ: ಮೂಕಾಂಬಿಕಾ ದೇವಾಡಿಗ, ಉಪಾಧ್ಯಕ್ಷರಾಗಿ ವೆರೋನಿಕಾ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಯಡ್ತರೆ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಗುರುವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಮೂಕಾಂಬು ಶ್ರೀನಿವಾಸ ದೇವಾಡಿಗ ಅಧ್ಯಕ್ಷರಾಗಿ ಮತ್ತು ವೆರೋನಿಕಾ ಡಿಸೋಜಾ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆ.

ಬೈಂದೂರು ತಹಶೀಲ್ದಾರ್ ರವಿ ಕಲಾಲ್ ಪಂಚಾಯಿತಿ ಸಭಾಂಗಣದಲ್ಲಿ ಆಯ್ಕೆ ಪ್ರಕ್ರಿಯೆ ನಡೆಸಿ, ಫಲಿತಾಂಶ ಘೋಷಣೆ ಮಾಡಿದರು. ಬಹುಮತ ಪಡೆದಿದ್ದ ಕಾಂಗ್ರೆಸ್ ಬೆಂಬಲಿತರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆ ನಡೆಯಿತು.

ನೂತನವಾಗಿ ಆಯ್ಕೆಯಾದ ಅಧ್ಯಕ್ಷ, ಉಪಾಧ್ಯಕ್ಷರನ್ನು ಕಾಂಗ್ರೆಸ್ ಬೈಂದೂರು ಬ್ಲಾಕ್ ಅಧ್ಯಕ್ಷ ಎಸ್. ಮದನಕುಮಾರ್ ಉಪ್ಪುಂದ, ಹಿರಿಯ ಮುಖಂಡ ಎಸ್. ರಾಜು ಪೂಜಾರಿ ಮೊದಲಾದವರು ಅಭಿನಂದಿಸಿದರು.

Exit mobile version