Kundapra.com ಕುಂದಾಪ್ರ ಡಾಟ್ ಕಾಂ

ಮೌಲ್ಯಾಧಾರಿತ ಶಿಕ್ಷಣ ಸಮಾಜಕ್ಕೆ ಅಗತ್ಯ: ಸುಭಾಶ್ಚಂದ್ರ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ವಿದ್ಯಾರ್ಥಿಗಳ ಸರ್ವಾಂಗೀಣ ವಿಕಾಸಕ್ಕೆ ಕೇವಲ ಪರೀಕ್ಷೆಯಲ್ಲಿ ಗಳಿಸುವ ಅಂಕಗಳಷ್ಟೇ ಪ್ರಮುಖವಲ್ಲ ಆದರೆ ಪ್ರತೀ ವಿದ್ಯಾರ್ಥಿಯು ನಮ್ಮ ದೇಶದ ಸಂಸ್ಕೃತಿ ಮತ್ತು ಸನಾತನತೆಯನ್ನು ಕಾಪಾಡುವ ಮುಂದಿನ ಭಾವೀ ಪ್ರಜೆಗಳು ಈ ಮೌಲ್ಯವನ್ನು ವಿದ್ಯಾರ್ಥಿಗಳಲ್ಲಿ ತುಂಬುವಲ್ಲಿ ಶಿಕ್ಷಣ ಸಂಸ್ಥೆ, ಶಿಕ್ಷಕರು ಹಾಗೂ ಪಾಲಕರು ಶ್ರಮ ವಹಿಸಬೇಕು ಎಂದು ಗುರುಕುಲ ವಿದ್ಯಾಸಂಸ್ಥೆಯ ಜಂಟಿ ಕಾರ್ಯನಿರ್ವಾಹಕ ಸುಭಾಶ್ಚಂದ್ರ ಶೆಟ್ಟಿ ತಮ್ಮ ಅಧ್ಯಕ್ಷೀಯ ಮಾತುಗಳನ್ನಾಡಿದರು.

ಸಂಸ್ಥೆಯ ಪ್ರಾಂಶುಪಾಲರಾದ ಅರವಿಂದ ಮರಳಿಯವರು ವಾರ್ಷಿಕ ಪರೀಕ್ಷೆಯನ್ನು ವಿದ್ಯಾರ್ಥಿಗಳು ಹೇಗೆ ಯಶಸ್ವಿಯಾಗಿ ಬರೆಯಬೇಕು ಮತ್ತು ೨೦೧೯-೨೦ನೇ ಶೈಕ್ಷಣಿಕ ವರ್ಷದಲ್ಲಿ ಪರಿಚಯಿಸುವ ಪುಸ್ತಕದ ಬಗ್ಗೆ ಪಾಲಕರಿಗೆ ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಜಂಟಿ. ಕಾರ್ಯನಿರ್ವಾಹಕರಾದ ಅನುಪಮಾ ಎಸ್. ಶೆಟ್ಟಿ ಉಪಸ್ಥಿತರಿದ್ದರು. ಸಂಸ್ಥೆಯ ಶಿಕ್ಷಕಿಯರಾದ ಸುಮನ್ ಹಾಗೂ ಬಬಿತ ಕ್ರಮವಾಗಿ ನಿರೂಪಿಸಿ ವಂದಿಸಿದರು.

 

Exit mobile version