ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ರಾಷ್ಟ್ರದ ಕುರಿತಾದ ಅಭಿಮಾನ, ವಿವಿಧತೆಯಲ್ಲಿ ಏಕತೆಯನ್ನು ಕಾಪಾಡುವ ಮನಸ್ಥಿತಿಯನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು. ಸಂವಿಧಾನ ತಿಳಿಸಿರುವ ಮೂಲಭೂತ ಕರ್ತವ್ಯವನ್ನು ಯುವಜನತೆ ನ್ಯಾಯಯುತವಾಗಿ ಪಾಲಿಸಿದರೆ ಸದೃಢ ಸಮಾಜ ನಿರ್ಮಾಣ ಸಾಧ್ಯ ಎಂದು ಬಿ.ಬಿ.ಹೆಗ್ಡೆ ಕಾಲೇಜು ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರವೀಣ್ ಮೊಗವೀರ ಗಂಗೊಳ್ಳಿ ಹೇಳಿದರು.
ಕುಂದಾಪುರ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಭಾವೈಕ್ಯತೆ ದಿನಾಚರಣೆಯಲ್ಲಿ ಮಾತನಾಡಿ ವೈಯಕ್ತಿಕ ನೆಲೆಯಲ್ಲಿ ರಾಷ್ಟ್ರದ ಕುರಿತಾದ ಸಕರಾತ್ಮಕ ಮನೋಭಾವವನ್ನು ಬೆಳೆಸಿಕೊಳ್ಳುವುದರ ಜೊತೆಗೆ ಬದುಕನ್ನು ರಾಷ್ಟ್ರಕ್ಕೆ ಸಮರ್ಪಿಸಬೇಕು ಎಂದರು.
ಕಾಲೇಜು ನಿರ್ದೇಶಕ ಪ್ರೊ. ದೋಮ ಚಂದ್ರಶೇಖರ್, ಪ್ರಭಾರ ಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು. ಕಾಲೇಜು ಎನ್.ಎಸ್.ಎಸ್. ಯೋಜನಾಧಿಕಾರಿ ಸತೀಶ್ ಶೆಟ್ಟಿ ಹೆಸ್ಕತ್ತೂರು ಕಾರ್ಯಕ್ರಮ ನಿರೂಪಿಸಿದರು.