Kundapra.com ಕುಂದಾಪ್ರ ಡಾಟ್ ಕಾಂ

ಜಿ.ಪಂ ಸದಸ್ಯ ರಾಘವೇಂದ್ರ ಕಾಂಚನ್ ಬಿಜೆಪಿಯಿಂದ ಅಮಾನತು

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕೋಟದಲ್ಲಿ ನಡೆದ ಅವಳಿ ಕೊಲೆ ಪ್ರಕರಣದಲ್ಲಿ ಭಾಗಿಯಾದ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಪಂಚಾಯತ್ ಸದಸ್ಯ ರಾಘವೇಂದ್ರ ಕಾಂಚನ್‌ನನ್ನು ಬಿಜೆಪಿ ಪಕ್ಷದಿಂದ ಉಚ್ಛಾಟನೆಗೊಳಿಸಿ ಆದೇಶ ಹೊರಡಿಸಲಾಗಿದೆ.

ಪ್ರಕರಣದಲ್ಲಿ ಆರೋಪಿಗಳ ಜತೆ ನಿರಂತರ ಸಂಪರ್ಕದಲ್ಲಿದ್ದ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತ್ ಕೋಟ ಕ್ಷೇತ್ರದಿಂದ ಆಯ್ಕೆಯಾಗಿದ್ದ ರಾಘವೇಂದ್ರ ಕಾಂಚನ್ ಅವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಪಕ್ಷದಿಂದ ಉಚ್ಛಾಟಿಸಿ ಆದೇಶ ಹೊರಡಿಸಿದ್ದಾರೆ.

ಕೋಟದ ಮಣೂರು ಚಿಕ್ಕನಕೆರೆ ಎಂಬಲ್ಲಿ ಜ.೨೬ರಂದು ಯತೀಶ್ ಹಾಗೂ ಭರತ್ ಎಂಬ ಇಬ್ಬರು ಯುವಕರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಚಂದ್ರಶೇಖರ ರೆಡ್ಡಿಯನ್ನು ಫೆ.೧೪ರಂಡು ಪೊಲೀಸರು ಬಂಧಿಸಿದ್ದರು. ಅಲ್ಲದೆ ಪ್ರಕರಣದಲ್ಲಿ ಆರೋಪಿಗಳಿಗೆ ನೆರವಾದ ಹಿನ್ನೆಲೆಯಲ್ಲಿ ಇಬ್ಬರು ಪೊಲೀಸ್ ಪೇದೆಗಳನ್ನೂ ಬಂಧಿಸಲಾಗಿದ್ದು, ಇದುವರೆಗೆ ೧೬ ಮಂದಿಯನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ.

ಇದನ್ನೂ ಓದಿ:
► ಕೋಟದಲ್ಲಿ ಯುವಕರಿಬ್ಬರ ಬರ್ಬರ ಕೊಲೆ – https://kundapraa.com/?p=30959 .
► ಕೋಟದಲ್ಲಿ ಸ್ನೇಹಿತರಿಬ್ಬರ ಕೊಲೆ: ರಸ್ತೆಯಲ್ಲಿ ಶವವಿಟ್ಟು ಪ್ರತಿಭಟನೆ – https://kundapraa.com/?p=30976 .
► ಸಾವಿನಲ್ಲೂ ಒಂದಾದ ಆಪ್ತ ಸ್ನೇಹಿತರು. ಮರುಗಿದ ಕೋಟ ಜನತೆ – https://kundapraa.com/?p=30979 .
► ಕೋಟ ಯುವಕರ ಹತ್ಯೆ ಪ್ರಕರಣ: ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ – https://kundapraa.com/?p=31009 .
► ಕೋಟ ಅವಳಿ ಕೊಲೆ ಪ್ರಕರಣ: ಜಿ.ಪಂ ಸದಸ್ಯ ರಾಘವೇಂದ್ರ ಕಾಂಚನ್ ಸೇರಿದಂತೆ 6 ಮಂದಿ ಬಂಧನ – https://kundapraa.com/?p=31071 .
► ಡಬ್ಬಲ್ ಮರ್ಡರ್​ ಆರೋಪಿಗಳ ಜೊತೆ ನಂಟು, ಇಬ್ಬರು ಪೇದೆಗಳ ಆರೆಸ್ಟ್​ – https://kundapraa.com/?p=31204 

► 14 ಆಪಾದಿತರಿಗೆ ನ್ಯಾಯಾಂಗ ಬಂಧನ, ಇಬ್ಬರಿಗೆ ಪೊಲೀಸ್ ಕಸ್ಟಡಿ – https://kundapraa.com/?p=31203 .

Exit mobile version