Kundapra.com ಕುಂದಾಪ್ರ ಡಾಟ್ ಕಾಂ

ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ರಕ್ಷಕ-ಶಿಕ್ಷಕ ಸಭೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಆಧುನಿಕತೆಗೆ ತೆರೆದುಕೊಳ್ಳದ ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು ಅಕ್ಷರ ಪ್ರಪಂಚಕ್ಕೆ ಪರಿಚಯಿಸುತಾ, ಆರೋಗ್ಯಕರ ಸಮಾಜ ಕಟ್ಟುವಲ್ಲಿ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಶ್ರಮಿಸುತ್ತಿದೆ ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕುಂದಾಪುರ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ಬಿ. ಎಮ್. ಸುಕುಮಾರ ಶೆಟ್ಟಿ ಹೇಳಿದರು.

ಇವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ರಕ್ಷಕ-ಶಿಕ್ಷಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೇವಲ ಪುಸ್ತಕದ ಓದಿಗೆ ವಿದ್ಯಾರ್ಥಿಗಳನ್ನು ಸೀಮಿತವಾಗಿರಿಸದೆ, ಭವಿಷ್ಯದ ಬದುಕಿಗೆ ಪೂರಕವಾಗುವಂತೆ ಕ್ರೀಡೆ, ಸಾಹಿತ್ಯ, ಸಾಂಸ್ಕೃತಿಕ ಕ್ಷೇತ್ರಗಳ ಪರಿಣಿತರನ್ನಾಗಿಸುತ್ತಿದೆ ಎಂದರು.

ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಗಣಪತಿ ಎಮ್.ಎಮ್. ಮಾತನಾಡಿ, ವಿದ್ಯಾರ್ಥಿಗಳನ್ನು ಸಮರ್ಥ ಪ್ರಜೆಯನ್ನಾಗಿ ರೂಪುಗೊಳಿಸುವಲ್ಲಿ ಹೆತ್ತವರ-ಶಿಕ್ಷಕರ ಸಹಭಾಗಿತ್ವ ಅಗತ್ಯ ಎಂದರು. ಕುಂದಾಪುರ ಎಜ್ಯುಕೇಶನ್ ಸೊಸೈಟಿ ಕಾರ್ಯದರ್ಶಿ ಸೀತಾರಾಮ ನಕ್ಕತ್ತಾಯ, ವಿ.ಕೆ.ಆರ್. ಆಚಾರ್ಯ ಮತ್ತು ಎಚ್.ಎಮ್.ಎಮ್. ಆಂಗ್ಲ ಮಾಧ್ಯಮ ಶಾಲಾ ಪ್ರಾಂಶುಪಾಲೆ ಚಿಂತನಾ ರಾಜೇಶ್ ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಸುಜಾತ ಖಾರ್ವಿ ಪ್ರಾರ್ಥಿಸಿದರು. ಕಾಲೇಜಿನ ನಿರ್ದೇಶಕ ಪ್ರೊ. ದೋಮ ಚಂದ್ರಶೇಖರ್ ಪ್ರಾಸ್ತಾವಿಸಿದರು. ಪ್ರಭಾರ ಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ವಾಣಿಜ್ಯ ವಿಭಾಗದ ಮುಖ್ಯಸ್ಥ ರಾಜೇಶ್ ಶೆಟ್ಟಿ ವಂದಿಸಿದರು. ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಸುಧಾಕರ್ ಪಾರಂಪಳ್ಳಿ ನಿರೂಪಿಸಿದರು.

Exit mobile version