Kundapra.com ಕುಂದಾಪ್ರ ಡಾಟ್ ಕಾಂ

ಸಿಎ ಪರೀಕ್ಷೆ ತೇರ್ಗಡೆಯಾದ ಉಷಾ ಪೂಜಾರಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಸಿಎ ಪರೀಕ್ಷೆಯಲ್ಲಿ ತೇರ್ಗಡೆಯಾದ ಮರವಂತೆಯ ಉಷಾ ಪೂಜಾರಿ ಅವರನ್ನು ಬೈಂದೂರು ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಪ್ರಧಾನ ಕಛೇರಿಯಲ್ಲಿ ಭಾನುವಾರ ಜರುಗಿದ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ವ್ಯವಸ್ಥಾಪನಾ ಸಮಿತಿ ಸದಸ್ಯ ರಾಜೇಶ್ ಕಾರಂತ್ ಉಪ್ಪಿನಕುದ್ರು, ಸಹಕಾರ ಅಭಿವೃದ್ಧಿ ಅಧಿಕಾರಿ ಅರುಣಕುಮಾರ್ ಎಸ್.ವಿ., ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಅಧ್ಯಕ್ಷ ಎಸ್. ರಾಜು ಪೂಜಾರಿ, ಉಪಾಧ್ಯಕ್ಷ ವಿನಾಯಕ ರಾವ್, ನಿರ್ದೇಶಕ ಶಿವರಾಮ ಪೂಜಾರಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ನಾಗರಾಜ ಪಿ. ಯಡ್ತರೆ ಮೊದಲಾದವರು ಇದ್ದರು.

 

Exit mobile version