Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ: ಮಕ್ಕಳ ಹಬ್ಬ, ಪ್ರತಿಭಾ ಪುರಸ್ಕಾರ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಸಮಾಜದ ಕಟ್ಟಕಡೆಯ ಮಗುವಿಗೂ ಶಿಕ್ಷಣ ಸಿಗುವಂತಾಗಬೇಕು. ಈ ನಿಟ್ಟಿನಲ್ಲಿ ಕನ್ನಡ ಶಾಲೆಗಳು ಕಾರ್ಯಪ್ರವೃತಗೊಂಡು ಕನ್ನಡ ಮಾಧ್ಯಮ ಶಾಲೆಗಳಲ್ಲಿ ಆಂಗ್ಲ ಮಾಧ್ಯಮಕ್ಕೂ ಅವಕಾಶ ನೀಡಬೇಕು. ಸರಕಾರಿ ಶಾಲೆಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸರಕಾರ ಗಂಭೀರ ಪ್ರಯತ್ನ ನಡೆಸುತ್ತಿದ್ದು, ವಿದ್ಯಾಭಿಮಾನಿಗಳು ಹಾಗೂ ಹಳೆ ವಿದ್ಯಾರ್ಥಿಗಳು ಕನ್ನಡ ಮಾಧ್ಯಮ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಹೆಚ್ಚಿಸಲು ಯೋಜನೆ ರೂಪಿಸಬೇಕು ಎಂದು ಜಿಲ್ಲಾ ಪಂಚಾಯತ್ ಸದಸ್ಯೆ ಶೋಭಾ ಜಿ.ಪುತ್ರನ್ ಹೇಳಿದರು.

ಅವರು ಮೇಲ್‌ಗಂಗೊಳ್ಳಿ ಸರಕಾರಿ ಕಿರಿಯ ಪ್ರಾಥಮಿಕ (ಹವೇ) ಶಾಲೆಯಲ್ಲಿ ಆಯೋಜಿಸಲಾಗಿದ್ದ ಮಕ್ಕಳ ಹಬ್ಬ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.

ಗಂಗೊಳ್ಳಿ ಉದ್ಯಮಿ ಎಚ್.ಗಣೇಶ ಕಾಮತ್ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ನಟರಾಜ್, ಶಕುಂತಲಾ ಮತ್ತು ಬಸವರಾಜ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಗಂಗೊಳ್ಳಿ ಗ್ರಾಮ ಪಂಚಾಯತ್ ಸದಸ್ಯೆ ಶಾಂತಿ ಖಾರ್ವಿ, ಅಕ್ಕಮ್ಮ, ಮಾಜಿ ಮಂಡಲ ಪ್ರಧಾನ ಬಿ.ಸದಾನಂದ ಶೆಣೈ, ಶಿಕ್ಷಣ ಸಂಯೋಜಕಿ ದೇವಕುಮಾರಿ, ಮಹಾಬಲ ಕೆ., ಗ್ರಾಪಂ ಮಾಜಿ ಸದಸ್ಯ ಯೂನಿಸ್ ಸಾಹೇಬ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜಿ.ಈಶ್ವರ, ಚಂದ್ರ ಕೆ. ಮತ್ತಿತರರು ಉಪಸ್ಥಿತರಿದ್ದರು.

ಶಾಲೆಯ ಮುಖ್ಯ ಶಿಕ್ಷಕ ರಮೇಶ ಮಹಾಲೆ ಸ್ವಾಗತಿಸಿದರು. ಸುಂದರ ಬಿ. ಕಾರ್ಯಕ್ರಮ ನಿರೂಪಿಸಿದರು. ಲಲಿತಾ ಟೀಚರ್ ವಂದಿಸಿದರು.

Exit mobile version