Site icon Kundapra.com ಕುಂದಾಪ್ರ ಡಾಟ್ ಕಾಂ

ಮಜಾ ಭಾರತ್‌ಗೆ ಆಯ್ಕೆಯಾದ ಧನ್ಯಾ ಪೂಜಾರಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಕಲರ‍್ಸ್ ಕನ್ನಡದ ಮಜಾ ಭಾರತ ರಿಯಾಲಿಟಿ ಶೋ ಕಾರ್ಯಕ್ರಮಕ್ಕೆ ಆಯ್ಕೆಯಾದ ಮರವಂತೆಯ ಧನ್ಯಾ ಪೂಜಾರಿ ಅವರನ್ನು ಬೈಂದೂರು ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಪ್ರಧಾನ ಕಛೇರಿಯಲ್ಲಿ ಇತ್ತಿಚಿಗೆ ಜರುಗಿದ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ವ್ಯವಸ್ಥಾಪನಾ ಸಮಿತಿ ಸದಸ್ಯ ರಾಜೇಶ್ ಕಾರಂತ್ ಉಪ್ಪಿನಕುದ್ರು, ಸಹಕಾರ ಅಭಿವೃದ್ಧಿ ಅಧಿಕಾರಿ ಅರುಣಕುಮಾರ್ ಎಸ್.ವಿ., ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಅಧ್ಯಕ್ಷ ಎಸ್. ರಾಜು ಪೂಜಾರಿ, ಉಪಾಧ್ಯಕ್ಷ ವಿನಾಯಕ ರಾವ್, ನಿರ್ದೇಶಕ ಶಿವರಾಮ ಪೂಜಾರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಾಗರಾಜ ಪಿ. ಯಡ್ತರೆ ಮೊದಲಾದವರು ಇದ್ದರು.

Exit mobile version