ಕುಂದಾಪ್ರ ಡಾಟ್ ಕಾಂ ಸುದ್ದಿ
ಬೈಂದೂರು: ನರೇಂದ್ರ ಮೋದಿಯವರು ಪ್ರಧಾನಿಯಾದ ಬಳಿಕ ಕೊಟ್ಟ ಭರವಸೆಗಳನ್ನು ಈಡೇರಿಸಿ ಜನರಲ್ಲಿ ವಿಶ್ವಾಸ ಮೂಡಿಸಿರುವುದಲ್ಲದೇ, ವಿಶ್ವದ ಮುಂದೆ ಭಾರತ ತಲೆಯೆತ್ತುವಂತೆ ಮಾಡಿದ್ದಾರೆ. ಹಾಗಾಗಿ ನಮ್ಮ ನಾಯಕನ ಹೆಸರನ್ನು ಹೇಳಿಯೇ ಚುನಾವಣೆ ಎದುರಿಸಲು ನಮಗೆ ಹೆಮ್ಮೆ ಇದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ. ಎಸ್. ಯಡಿಯೂರಪ್ಪ ಹೇಳಿದರು.
ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಜೆಪಿಯ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ದೇಶದಲ್ಲಿ ೩೦೦ ಲೋಕಸಭಾ ಕ್ಷೇತ್ರಗಳನ್ನು, ಕರ್ನಾಟಕದಲ್ಲಿ ಕನಿಷ್ಠ ೨೨ ಲೋಕಸಭಾ ಕ್ಷೇತ್ರಗಳನ್ನು ಗೆದ್ದು ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾಗುತ್ತಾರೆ ಎಂದರು.
ನರೇಂದ್ರ ಮೋದಿಯವರು ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ಮುಂಚೆ ಭ್ರಷ್ಟಾಚಾರ ಮುಕ್ತ ಸರಕಾರ, ಶ್ರೀಸಾಮಾನ್ಯರಿಗೆ ತಲುಪುವಂತಹ ಅಭಿವೃದ್ಧಿ ಕಾರ್ಯ, ದೇಶದ ಗಡಿಗಳ ರಕ್ಷಣೆ, ವಿದೇಶದಲ್ಲಿ ಭಾರತದ ಗೌರವ ಹೆಚ್ಚುವ ರೀತಿಯಲ್ಲಿ ಮುನ್ನಡೆಯುದಾಗಿ ಹೇಳಿದ್ದರು. ಅದರಂತೆಯೇ ನಡೆದಿದ್ದಾರೆ. ಜನರ ವಿಶ್ವಾಸವನ್ನು ಉಳಿಸಿಕೊಂಡಿದ್ದಾರೆ ಎಂದರು.

Also Read: ► ರಾಜ್ಯದಲ್ಲಿ ಬಿಜೆಪಿಗೆ 22 ಸೀಟು ಗ್ಯಾರೆಂಟಿ – https://kundapraa.com/?p=31686