Kundapra.com ಕುಂದಾಪ್ರ ಡಾಟ್ ಕಾಂ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಉಡುಪಿ ಪ್ರಥಮ, ದ.ಕ ದ್ವಿತೀಯ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೆಂಗಳೂರು: 2018-19ನೇ ಸಾಲಿನ ದ್ವೀತಿಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ. ಶೇ. 92.20 ಅಂಕಗಳನ್ನು ಗಳಿಸಿರುವ ಉಡುಪಿ ಜಿಲ್ಲೆ ಮೊದಲ ಸ್ಥಾನದಲ್ಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ಶೇ.90.91 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ದ್ವಿತೀಯ ಸ್ಥಾನದಲ್ಲಿದೆ. ಕೊಡಗು ಶೇ. 83.31ಗಳೊಂದಿಗೆ ಮೂರನೇ ಸ್ಥಾನದಲ್ಲಿದೆ. ಶೇ.51.42 ಫಲಿತಾಂಶ ಪಡೆದಿರುವ ಚಿತ್ರದುರ್ಗ ಕೊನೆಯ ಸ್ಥಾನದಲ್ಲಿದೆ.

ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸಿ,ಶಿಖಾ ಮತ್ತು ಎಸ್,ಆರ್ ಉಮಾಶಂಕರ್ ಸುದ್ದಿಗೋಷ್ಠಿ ನಡೆಸಿ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಿದ್ದಾರೆ.

ರಾಜ್ಯದ 98 ಕಾಲೇಜುಗಳಲ್ಲಿ ಶೂನ್ಯ ಫಲಿತಾಂಶ ಹಾಗೂ 80 ಕಾಲೇಜುಗಳಲ್ಲಿ ಶೇ.100 ರಷ್ಟು ಫಲಿತಾಂಶ ಬಂದಿದೆ. 4,17,573 ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೇ ಈ ಬಾರಿ ಫಲಿತಾಂಶದಲ್ಲಿ ಏರಿಕೆಯಾಗಿದೆ ಎಂದು ಕಾರ್ಯದರ್ಶಿ ಎಸ್,ಆರ್ ಉಮಾಶಂಕರ್ ತಿಳಿಸಿದ್ದಾರೆ, ಮಧ್ಯಾಹ್ನ 12 ಗಂಟೆ ನಂತರ http://kseeb.kar.nic.in ವೆಬ್ ಸೈಟ್ ನಲ್ಲಿ ಪಡೆಯಬಹುದಾಗಿದೆ.

ಈ ವರ್ಷವೂ ನಗರದ ಹುಡುಗರಿಗಿಂತ ಹಳ್ಳಿಯ ಹುಡುಗರೇ ಫಲಿತಾಂಶದಲ್ಲಿ ಮೇಲುಗೈ ಸಾಧಿಸಿದ್ದಾರೆ. ಈ ವರ್ಷ ಶೇ.61.73ರಷ್ಟು ಫಲಿತಾಂಶ ಬಂದಿದೆ. ಶೇ.68.24ರಷ್ಟು ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ. ಕಳೆದ ವರ್ಷಕ್ಕಿಂತ ಈ ಬಾರಿ ಫಲಿತಾಂಶದಲ್ಲಿ ಏರಿಕೆಯಾಗಿದೆ.

ಈ ಬಾರಿ ಆಯಾ ಮೌಲ್ಯಮಾಪನ ಕೇಂದ್ರಗಳಿಂದಲೇ ಮೌಲ್ಯಮಾಪಕರು ಆನ್ಲೈನ್ನಲ್ಲಿ ಅಂಕಗಳನ್ನು ಅಪ್ಲೋಡ್ ಮಾಡಿದ್ದರಿಂದ ಮೌಲ್ಯಮಾಪನ ಪ್ರಕ್ರಿಯೆ ಬೇಗ ಮುಗಿಯಿತು. ಇದರಿಂದ ಇಲಾಖೆಯು ಸುಮಾರು 15 ದಿನಗಳ ಮೊದಲೇ ಫಲಿತಾಂಶವನ್ನು ಪ್ರಕಟಿಸಲು ಸಾಧ್ಯವಾಗಿದೆ. ಮಾರ್ಚ್ 1ರಿಂದ 18ರವರೆಗೆ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯನ್ನು 6.73 ಲಕ್ಷ ವಿದ್ಯಾರ್ಥಿಗಳು ಬರೆದಿದ್ದರು.

Exit mobile version