ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ತಾಲೂಕಿನ ಬಿಜೂರು ಗ್ರಾಮದ ಗರಡಿಬೆಟ್ಟು ಪರಿಸರದ ಮತದಾರರು ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಮತದಾನ ಬಹಿಷ್ಕರಿಸಿದ ಘಟನೆ ನಡೆದಿದೆ.
ಕೆಲವು ದಿನಗಳ ಹಿಂದೆ ಬಿಜೂರಿನಲ್ಲಿ ಚುನಾವಣೆ ಬಹಿಷ್ಕಾರ ಬ್ಯಾನರ್ ಹಾಕಿದ್ದನ್ನು ಅಧಿಕಾರಿಗಳು ಮನ ಒಲಿಸಿ ತೆರವು ಮಾಡಿದರು. ಆದರೆ ನಮ್ಮ ಬೇಡಿಕೆಗೆ ಸ್ಪಂದಿಸಿಲ್ಲ ಎಂದು ಆರೋಪಿಸಿ ಚುನಾವಣೆ ಬಹಿಷ್ಕರಿಸಿದ್ದರೆ. ಕಳೆದ ೨೦ ವರ್ಷದಿಂದ ನೀರಿನ ಸಮಸ್ಯೆ ಪರಿಹಾರ ಮಾಡುವಂತೆ ಕೇಳಿಕೊಂಡರೂ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ. ಸಂಜೆಯ ವೇಳೆಗೆ ಆ ಬೂತ್‌ನಲ್ಲಿ ಶೇ.50ರಷ್ಟು ಮತದಾನವಷ್ಟೇ ಆಗಿದೆ.