Kundapra.com ಕುಂದಾಪ್ರ ಡಾಟ್ ಕಾಂ

ಸ್ವಯಂಪ್ರೇರಿತ ರಕ್ತದಾನದಿಂದ ಮೂರು ಜೀವ ಉಳಿಸಿದ ಪುಣ್ಯ: ಜಯಕರ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ : ಆರೋಗ್ಯವಂತ ವ್ಯಕ್ತಿ ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು. ಸ್ವಯಂಪ್ರೇರಿತ ರಕ್ತದಾನ ಮಾಡುವುದರಿಂದ ಮೂರು ಜೀವಗಳನ್ನು ಉಳಿಸಿದ ಪುಣ್ಯ ದೊರಕುತ್ತದೆ. ಸ್ವಯಂಪ್ರೇರಿತ ರಕ್ತದಾನ ಮಾಡುವುದರಿಂದ ರಕ್ತನಿಧಿ ಕೇಂದ್ರಗಳಲ್ಲಿ ರಕ್ತದ ಕೊರತೆ ಬಾರದಂತೆ ಮಾಡಬಹುದು ಎಂದು ಕುಂದಾಪುರದ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಚೇರ್‌ಮೆನ್ ಎಸ್. ಜಯಕರ ಶೆಟ್ಟಿ ಹೇಳಿದರು.

ಶ್ರೀ ಇಂದುಧರ ಯುವಕ ಮಂಡಲ ಗಂಗೊಳ್ಳಿ, ಯಕ್ಷಾಭಿಮಾನಿ ಬಳಗ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ರಕ್ತನಿಧಿ ಕೇಂದ್ರ ಕುಂದಾಪುರ ಇವರ ಸಹಯೋಗದೊಂದಿಗೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ಜರಗಿದ ಸ್ವಯಂಪ್ರೇರಿತ ರಕ್ತದಾನ ಶಿಬಿರದಲ್ಲಿ ಮಾತನಾಡಿದರು.

ಗಂಗೊಳ್ಳಿಯ ಮತ್ಸ್ಯೋದ್ಯಮಿ ಮಂಜುನಾಥ ಜಿ.ಟಿ. ಶಿಬಿರ ಉದ್ಘಾಟಿಸಿದರು. ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಸದಸ್ಯ ಗಣೇಶ ಆಚಾರ್ಯ, ಗಂಗೊಳ್ಳಿ ಗ್ರಾಪಂ ಸದಸ್ಯರಾದ ಬಿ.ಗಣೇಶ ಶೆಣೈ, ಮಹಮ್ಮದ್ ತಬ್ರೇಜ್, ರಕ್ತದಾನಿ ಗುರುಚರಣ್ ಖಾರ್ವಿ, ಗಂಗೊಳ್ಳಿ ಶಾಹಿ ಮಸೀದಿ ಅಧ್ಯಕ್ಷ ಮಹಮ್ಮದ್ ಅಫ್ಜಲ್, ಯಕ್ಷಾಭಿಮಾನಿ ಬಳಗದ ಗಣೇಶ ಪೂಜಾರಿ, ಶ್ರೀ ಇಂದುಧರ ದೇವಸ್ಥಾನದ ಅಧ್ಯಕ್ಷ ಸುಂದರ ಬಿ., ಉಪಾಧ್ಯಕ್ಷ ಸುರೇಶ ಜಿ., ಕಾರ್ಯದರ್ಶಿ ವಾಸು ಬಿ., ಯುವಕ ಮಂಡಲದ ಅಧ್ಯಕ್ಷ ಸುದೀಪ ಜಿ.ಎಸ್., ಗೌರವಾಧ್ಯಕ್ಷ ಗುರುರಾಜ್ ಜಿ., ಗಣೇಶ ಖಾರ್ವಿ, ರಾಜ ಖಾರ್ವಿ, ಸಂದೇಶ ಜಿ.ಎಂ., ಬಾಬು ಖಾರ್ವಿ, ಮತ್ತಿತರರು ಉಪಸ್ಥಿತರಿದ್ದರು.

ಸುಂದರ ಬಿ. ಸ್ವಾಗತಿಸಿದರು. ಸುರೇಶ ಜಿ. ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಕುಮಾರ ಜಿ.ಟಿ. ವಂದಿಸಿದರು.

Exit mobile version