Site icon Kundapra.com ಕುಂದಾಪ್ರ ಡಾಟ್ ಕಾಂ

ಆಟೋರಿಕ್ಷಾಗಳಿಗೆ ಕಲರ್ ಕೋಡಿಂಗ್ ಕಡ್ಡಾಯ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲಾ ದಂಡಾಧಿಕಾರಿಗಳ ಅಧಿಸೂಚನೆಯನ್ವಯ ಉಡುಪಿ ಹಾಗೂ ಕುಂದಾಪುರ ತಾಲೂಕು ವ್ಯಾಪ್ತಿಯ ಆಟೋರಿಕ್ಷಾಗಳಿಗೆ ಕಲರ್ ಕೋಡಿಂಗ್ (ವಲಯವಾರು) ನೀಡಲಾಗುತ್ತಿದ್ದು, ಈ ಬಗ್ಗೆ ಆಟೋರಿಕ್ಷಾ ಮಾಲಕರು ಪರವಾನಿಗೆ ಮತ್ತು ವಾಹನದ ಮೂಲ ದಾಖಲೆಗಳನ್ನು ಹಾಜರುಪಡಿಸಿ, ವಲಯವಾರು ಸ್ಟಿಕ್ಕರ್‌ನ್ನು ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ, ಸಾರಿಗೆ ಸೌಧ, ಮಣಿಪಾಲ ಇಲ್ಲಿ ಕಚೇರಿಯ ಸಮಯದಲ್ಲಿ ಪಡೆಯುವಂತೆ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಪ್ರಭಾರ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version