Kundapra.com ಕುಂದಾಪ್ರ ಡಾಟ್ ಕಾಂ

ದ.ಕ ಹಾಲು ಉತ್ಪಾದಕರ ಒಕ್ಕೂಟ: ನಿರ್ದೇಶಕರಾಗಿ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಸಹಕಾರಿ ಧುರೀಣ ಹಾಗೂ ಪ್ರಗತಿಪರ ಕೃಷಿಕ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅವರು ದಕ್ಷಿಣಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ., ಮಂಗಳೂರು ಇದರ ಮುಂದಿನ 5 ವರ್ಷಗಳ ಅವಧಿಗೆ ಆಡಳಿತ ಮಂಡಳಿಯ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಪ್ರಕಾಶ್ಚಂದ್ರ ಶೆಟ್ಟಿ ಅವರು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ, ಮೇಕೋಡು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಸಹಕಾರಿ ಕೃಷಿ ಹಾಗೂ ಹೈನುಗಾರಿಕೆ ಕ್ಷೇತ್ರದಲ್ಲಿ ಯಶಸ್ವಿಯಾಗಿ ತೊಡಗಿಸಿಕೊಂಡಿದ್ದಾರೆ. ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಮಾಜಿ ನಿರ್ದೇಶಕರಾಗಿ, ಕುಂದಾಪುರ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

Exit mobile version