ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಭಂಡಾರ್‌ಕಾರ‍್ಸ್ ಕಾಲೇಜಿನ ಯೂತ್ ರೆಡ್‌ಕ್ರಾಸ್ ಘಟಕದ ಆಶ್ರಯದಲ್ಲಿ ’ಆರೋಗ್ಯ ಮತ್ತು ನೈರ್ಮಲ್ಯ’ ಎಂಬ ವಿಷಯದ ಕುರಿತಂತೆ ಉಪನ್ಯಾಸ ಕಾರ್ಯಕ್ರಮವನ್ನು ಕಾಲೇಜಿನ ಆರ್. ಎನ್. ಶೆಟ್ಟಿ ಸಭಾಂಗಣದಲ್ಲಿಆಯೋಜಿಸಲಾಗಿತ್ತು.
ಕಾರ್ಯಕ್ರಮದ ಪೂರ್ವಭಾವಿಯಾಗಿ ವಿದ್ಯಾರಾಣಿಯವರಿಂದ ’ಅಭಿವಿನ್ಯಾಸ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಆರೋಗ್ಯ ಮತ್ತು ನೈರ್ಮಲ್ಯ ಕಾರ್ಯಕ್ರಮದಲ್ಲಿ ಕುಂದಾಪುರದ ಪ್ರತಿಷ್ಠಿತ ಆಸ್ಪತ್ರೆಯ ನಿರ್ದೇಶಕಿಯಾದ ಡಾ. ಪ್ರಮೀಳಾ ನಾಯಕ್‌ರವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ನೈರ್ಮಲ್ಯದಿಂದ ಆರೋಗ್ಯ ಎನ್ನುವ ಮಾತನ್ನು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿಕೊಟ್ಟರು. ಕಾರ್ಯಕ್ರಮವನ್ನು ಪ್ರೊ. ಸತ್ಯನಾರಾಯಣ ಸಂಯೋಜಿಸಿದರು. ಸ್ವಾತಿ ಸ್ವಾಗತಿಸಿ, ಅನುಷಾ ನಿರೂಪಿಸಿ, ಅಮೃತಾ ವಂದಿಸಿದರು.