Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜು: ಹಳೆ ವಿದ್ಯಾರ್ಥಿಗಳಿಂದ ಗುರುವಂದನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇತ್ತಿಚಿಗೆ ರಚನೆಗೊಂಡ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ 1982-90ರ ಅವಧಿಯಲ್ಲಿ ಸೇವೆಗೈದ ಉಪನ್ಯಾಸಕರಿಗಳಿಗೆ ಗುರುವಂದನೆ ಸಲ್ಲಿಸಲಾಯಿತು.

ಅಧ್ಯಕ್ಷತೆ ವಹಿಸಿದ್ದ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರವೀಣಚಂದ್ರ ಶೆಟ್ಟಿ ಮಾತನಾಡಿ ಕಾಲೇಜಿನಲ್ಲಿ ಕಲಿತ ವಿದ್ಯಾರ್ಥಿಗಳು ಹಳೆ ವಿದ್ಯಾರ್ಥಿ ಸಂಘವನ್ನು ಸೇರ್ಪಡೆಗೊಳ್ಳುವಂತೆ ಕರೆ ನೀಡಿ, ಹಳೆ ವಿದ್ಯಾರ್ಥಿಗಳ ಪುನರ್ ಮಿಲನದಿಂದ ಸಾಮಾಜಿಕವಾಗಿ, ವ್ಯಾವಹಾರಿಕವಾಗಿ ಮತ್ತಷ್ಟು ಕೆಲಸಗಳನ್ನು ಮಾಡಲು ಸಾಧ್ಯವಿದೆ ಎಂದರು.

ಬೈಂದೂರು ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಬಿ. ಎ. ಮೇಳಿ ಮಾತನಾಡಿ ಶುಭಹಾರೈಸಿದರು. ನಿವೃತ್ತ ಉಪನ್ಯಾಸಕರಾದ ಎಮ್. ಎನ್. ಹೆಗ್ಡೆ, ಬಿ. ಜಗದೀಶ್ ರಾವ್, ಮೊಹಮ್ಮದ್ ಹಬೀಬ್, ಡಾ. ಶ್ಯಾಮ್ ಸುಂದರ್, ದಯಾಕರ್ ಮೊದಲಾದವರನ್ನು ಸನ್ಮಾನಿಸಲಾಯಿತು.

ಸಿಎ ರಾಮಚಂದ್ರ ಪ್ರಭು, ಮುತ್ತಯ್ಯ ಎಸ್., ಮೋಹನ ಪೂಜಾರಿ ಉಪ್ಪುಂದ ಮೊದಲಾದವರು ಇದ್ದರು. ಹಳೆ ವಿದ್ಯಾರ್ಥಿ ಸಂಘದ ಸಲಹೆಗಾರ ರಮೇಶ್ ಭಟ್ ಸ್ವಾಗತಿಸಿದರು. ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಎಲ್. ಹರೀಶ್ ಶೇರುಗಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು.

Exit mobile version