Site icon Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸುಧಾಕರ ದೇವಾಡಿಗ ಮರು ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶ್ರೀ ಸೇನೇಶ್ವರ ದೇವಸ್ಥಾನ ಬೈಂದೂರು ಇದರ 2019-20ನೇ ಸಾಲಿನ ಅಧ್ಯಕ್ಷರಾಗಿ ಸುಧಾಕರ ದೇವಾಡಿಗ ಯಡ್ತರೆ ಹಾಗೂ ಕಾರ್ಯದರ್ಶಿಯಾಗಿ ಚಂದ್ರ ಪೂಜಾರಿ ಯಡ್ತರೆ ಮರು ಆಯ್ಕೆಗೊಂಡಿದ್ದಾರೆ.

ಉಪಾಧ್ಯಕ್ಷರಾಗಿ ಹೆರಿಯ ದೇವಾಡಿಗ, ಗುರುಪ್ರಕಾಶ್, ಜೊತೆ ಕಾರ್ಯದರ್ಶಿಯಾಗಿ ನಾಗರಾಜ ಪಿ. ಯಡ್ತರೆ, ಶಿವ, ಸುಬ್ರಹ್ಮಣ್ಯ ಶೆಟ್ಟಿ, ಗೌರವ ಲೆಕ್ಕ ಪರಿಶೋಧಕರಾಗಿ ಸುರೇಶ ಬಟ್ವಾಡಿ, ಸಂಘಟನಾ ಕಾರ್ಯದರ್ಶಿಗಳಾಗಿ ಶಾಂ ಶೇಟ್, ರವೀಂದ್ರ ಜೆ, ರವೀಂದ್ರ ಶಾನುಭೋಗ್, ಕಾರ್ಯಕ್ರಮ ಉಸ್ತುವಾರಿಯಾಗಿ ಸಂಜಯ ಬೈಂದೂರು, ಶಂಕರ ಮೊಗವೀರ, ಆಯ್ಕೆಯಾಗಿದ್ದಾರೆ ಎಂದು ಸಮಿತಿಯ ಪ್ರಕಟಣೆ ತಿಳಿಸಿದೆ.

Exit mobile version