Kundapra.com ಕುಂದಾಪ್ರ ಡಾಟ್ ಕಾಂ

ಕಮಲಶಿಲೆ: ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿಗೆ ಕುಬ್ಜೆಯಿಂದ ನೈಸರ್ಗಿಕ ಅಭಿಷೇಕ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕಮಲಶಿಲೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಗರ್ಭಗುಡಿಯೊಳಕ್ಕೆ ಕುಬ್ಜಾ ನದಿ ನೀರು ನುಗ್ಗಿದ್ದು, ಭಕ್ತರು ನೀರಲ್ಲಿ ನಿಂತು ಪೂಜೆ ಸಲ್ಲಿಸಿದರು. ವರ್ಷಂಪ್ರತಿಯೂ ನೈಸರ್ಗಿಕ ನದಿ ನೀರಿನ ಅಭಿಷೇಕ ಇಲ್ಲಿ ಸಾಮಾನ್ಯಾವಾಗಿದ್ದು ಸುತ್ತಲೂ ಜಲಾವೃತವಾಗಿ ನೀರಿನ ಮಧ್ಯೆ ಕುಳಿತಿರುವ ದೇವಿಯನ್ನು ಕಣ್ತುಂಬಿಸಿಕೊಳ್ಳಲು ನೂರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು.

ದೇವಳದ ಗರ್ಭಗುಡಿ ಜಲಾವೃತ ಆಗುತ್ತಿದ್ದಂತೆ ದೇವಿಗೆ ಅರ್ಚಕರು ಆರತಿ ಬೆಳಗಿದರು. ವರ್ಷಕ್ಕೊಮ್ಮೆ ದೇವಿಗೆ ನೈಸರ್ಗಿಕ ಅಭಿಷೇಕವಾಗುತ್ತದೆ. ನೀರು ಬಂದ ಹಿನ್ನಲೆ ಭಕ್ತರು ನೀರಿನಲ್ಲೇ ತೆರಳಿ ದೇವಿಯ ದರ್ಶನ ಪಡೆದರು. ಬಳಿಕ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ಅಮ್ಮನವರ ತೆಪ್ಪೋತ್ಸವನ್ನು ನಡೆಯಿತು. ಕುಂದಾಪ್ರ ಡಾಟ್ ಕಾಂ ಸುದ್ದಿ.

ವಾಡಿಕೆಯಂತೆ ಗರ್ಭಗುಡಿಗೆ ಬಂದ ನೀರು ಹರಿದು ಬಂದಿದ್ದು, ಇಲ್ಲಿ ವರ್ಷಕ್ಕೊಮ್ಮೆ ದೇವಿಗೆ ನೈಸರ್ಗಿಕ ನದಿ ನೀರಿನ ಅಭಿಷೇಕ ಸಾಮಾನ್ಯ. ನದಿ ನೀರು ಬಂದ ಹಿನ್ನಲೆಯಲ್ಲಿ ಭಕ್ತರು ಪುಳಕಗೊಂಡಿದ್ದರು. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹಚ್ಚಹಸಿರಿನ ಕಾಡಿನ ಮಧ್ಯಭಾಗದಲ್ಲಿರುವ ಕಮಲಶಿಲೆ ಇದೆ.  ಅರಣ್ಯದ ತಪ್ಪಲಿನಲ್ಲಿ ಪವಿತ್ರವಾದ ಕುಬ್ಜ ನದಿಯು ಹರಿಯುತ್ತಿದ್ದು, ನದಿಯ ತಟದಲ್ಲಿ ಪ್ರಾಚೀನ ಬ್ರಾಹ್ಮಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನವಿದೆ.

 

Exit mobile version