ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶಿರೂರು ಅಳ್ವೆಗದ್ದೆ ಬಂದರಿನ ಸಂಪರ್ಕ ರಸ್ತೆ ದುರಸ್ತಿಗಾಗಿ ೮೦ ಲಕ್ಷ ರೂ ಮಂಜೂರಾಗಿದ್ದು, ಕಾಮಗಾರಿಗೆ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದರು.
ತಾ. ಪಂ ಸದಸ್ಯ ಪುಪ್ಪರಾಜ ಶೆಟ್ಟಿ, ಕ್ಷೇತ್ರ ಬಿಜೆಪಿ ಪ್ರಧಾನ ಕಾರ್ಯದರ್ಶಿ ದೀಪಕಕುಮಾರ ಶೆಟ್ಟಿ, ಶಿರೂರು ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ರಾಮ ಎಂ. ಮೊಗೇರ್, ಇಂಜಿನೀಯರ್ ವಿಜಯ ಶೆಟ್ಟಿ ಉಪಸ್ಥಿತರಿದ್ದರು.