Kundapra.com ಕುಂದಾಪ್ರ ಡಾಟ್ ಕಾಂ

ಪ್ರತಿಭಾ ಕಾರಂಜಿ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ವೇದಿಕೆ: ಶಂಕರ ಪೂಜಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಪ್ರತಿಭಾ ಕಾರಂಜಿ ವಿದ್ಯಾರ್ಥಿಳಲ್ಲಿನ ಪ್ರತಿಭಾ ಪ್ರದರ್ಶನಕ್ಕೆ ಸೂಕ್ತ ವೇದಿಕೆಯಾಗಿದ್ದು, ಪಠ್ಯೇತರ ಚಟುವಟಿಕೆಗಳಲ್ಲಿಯೂ ಆಸಕ್ತಿಯಿಂದ ಭಾಗವಹಿಸಲು ನೆರವಾಗುತ್ತದೆ. ಪ್ರಾಥಮಿಕ ಹಂತದಲ್ಲಿಯೇ ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಶಿಕ್ಷಕರ ಪಾತ್ರವೂ ದೊಡ್ಡದಿದೆ ಎಂದು ಜಿಲ್ಲಾ ಪಂಚಾಯತ್ ಸದಸ್ಯ ಶಂಕರ ಪೂಜಾರಿ ಹೇಳಿದರು.

ಅವರು ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕ್ಷೇತ್ರ ಸಂಪನ್ಮೂಲ ಕಛೇರಿ ಸಂಯುಕ್ತಾಶ್ರಯದಲ್ಲಿ ತಗ್ಗರ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆತಿಥ್ಯದಲ್ಲಿ ಮಂಗಳವಾರ ಆಯೋಜಿಸಲಾದ ಬೈಂದೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ವರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು.

ಬೈಂದೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾಗೀರಥಿ, ಉಪಾಧ್ಯಕ್ಷ ವೆಂಕಟ ಪೂಜಾರಿ, ಸದಸ್ಯರಾದ ಬಾಲಕೃಷ್ಣ ಹೆಗ್ಡೆ, ಶಾರದಾ, ವಾಸು ಮರಾಠಿ, ಕಾರ್ಯಕ್ರಮದ ಪ್ರೋತ್ಸಾಹಕರಾದ ವೆಂಕಟರಮಣ ದಾಸ್, ದಿವಾಕರ ಶೆಟ್ಟಿ ನೆಲ್ಯಾಡಿ, ಹನುಮಂತ ಶೇರುಗಾರ್, ಪ್ರತಿಭಾ ಕಾರಂಜಿ ನೋಡೆಲ್ ಆಫಿಸರ್ ಸುಧಾಕರ ದೇವಾಡಿಗ, ಬಿಆರ್‌ಪಿ ಕರುಣಾಕರ ಶೆಟ್ಟಿ, ಸಿಆರ್‌ಪಿ ದಿನಕರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿಶ್ವನಾಥ ಪೂಜಾರಿ, ಎಸ್‌ಡಿಎಂಸಿ ಅಧ್ಯಕ್ಷ ಪ್ರಭಾಕರ ಗಾಣಿಗ, ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ವೆಂಕಟರಮಣ ದೇವಾಡಿಗ, ಅಧ್ಯಕ್ಷ ವಸಂತ ಮೊಗವೀರ ಮೊದಲಾದವರು ವೇದಿಕೆಯಲ್ಲಿದ್ದರು.

ಕ್ಷೇತ್ರ ಸಮನ್ವಯಾಧಿಕಾರಿ ಅಬ್ದುಲ್ ರವೂಫ್ ಪ್ರಸ್ತಾವನೆಗೈದರು. ಶಾಲಾ ಮುಖ್ಯೋಪಧ್ಯಾಯ ತಿಮ್ಮಪ್ಪ ಗಾಣಿಗ ಸ್ವಾಗತಿಸಿ, ಶಿಕ್ಷಕಿ ಸಂಗೀತ ವಂದಿಸಿದರು. ಶಿಕ್ಷಕಿಯರಾದ ಜ್ಯೋತಿ ಶ್ರೀಧರ್ ಹಾಗೂ ಸಾರಿಕಾ ಕಾರ್ಯಕ್ರಮ ನಿರೂಪಿಸಿದರು.

Exit mobile version