Kundapra.com ಕುಂದಾಪ್ರ ಡಾಟ್ ಕಾಂ

ಸೆ.7ರಂದು ಕುಂದಾಪುರದಲ್ಲಿ ಲೋಕಾಯುಕ್ತದಿಂದ ಸಾರ್ವಜನಿಕರ ಅಹವಾಲು ಸ್ವೀಕಾರ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕರ್ನಾಟಕ ಲೋಕಾಯುಕ್ತ ಉಡುಪಿ ವಿಭಾಗದ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ಸಪ್ಟೆಂಬರ್ 7 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2ಗಂಟೆಯವರೆಗೆ ಕುಂದಾಪುರ ತಾಲೂಕು ಕಚೇರಿಯಲ್ಲಿ ಸಾರ್ವಜನಿಕರ ಕುಂದು ಕೊರತೆ ಹಾಗೂ ಅಹವಾಲು ಸ್ವೀಕಾರ ಕಾರ್ಯಕ್ರಮ ನಡೆಸಲಿರುವರು.

ಕುಂದಾಪುರ ತಾಲೂಕಿನ ಇಲಾಖೆಯ ಅಧಿಕಾರಿಗಳಿಂದ ಸಾರ್ವಜನಿಕರಿಗೆ ತೊಂದರೆಯಾಗಿದ್ದಲ್ಲಿ, ಕುಂದಾಪುರ ತಾಲೂಕು ಕಚೇರಿಗೆ ಆಗಮಿಸಿ, ದೂರನ್ನು ಸಲ್ಲಿಸಬಹುದಾಗಿದೆ. ಕಾರ್ಯಕ್ರಮದಲ್ಲಿ ಕುಂದಾಪುರ ತಾಲೂಕಿನ ಎಲ್ಲಾ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಾಗಲಿದ್ದು, ಸ್ಥಳದಲ್ಲಿಯೇ ಇತ್ಯರ್ಥಪಡಿಸಬಹುದಾದ ದೂರುಗಳನ್ನು ಅಲ್ಲಿಯೇ ಇತ್ಯರ್ಥಪಡಿಸಲಾಗುವುದು. ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ದೂರು ಅರ್ಜಿಯ ನಮೂನೆ 1 ಮತ್ತು 2 ನ್ನು ಸ್ಥಳದಲ್ಲಿ ವಿತರಿಸಲಾಗುವುದು. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕುಂದಾಪುರ ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version