Kundapra.com ಕುಂದಾಪ್ರ ಡಾಟ್ ಕಾಂ

ಕೆಆರ್‌ಎಸ್‌ಎಸ್ ಸಂಘ ಉಪ್ಪುಂದ: ಎಸ್. ರಾಜು ಪೂಜಾರಿ ಅವರಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ನಾಮ ನಿರ್ದೇಶಿತ ಸದಸ್ಯರಾಗಿ ಆಯ್ಕೆಗೊಂಡ ಜಿಲ್ಲಾ ಕೇಂದ್ರ ಬ್ಯಾಂಕಿನ ನಿರ್ದೇಶಕ ಎಸ್. ರಾಜು ಪೂಜಾರಿ ಅವರನ್ನು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅವರು ಶುಕ್ರವಾರ ಸಂಘದ ಕಛೇರಿಯಲ್ಲಿ ನಡೆದ ಸಭೆಯಲ್ಲಿ ಗೌರವಿಸಿದರು.

ಈ ಸಂದರ್ಭ ಸಂಘದ ನಿರ್ದೇಶಕರುಗಳಾದ ಕೆ. ಮೋಹನ ಪೂಜಾರಿ, ಈಶ್ವರ ಹಕ್ಲತೋಡು, ಗುರುರಾಜ ಹೆಬ್ಬಾರ್, ಕೊರಗ ದೇವಾಡಿಗ, ಸುರೇಶ್ ಶ್ಯಾನುಭಾಗ್, ದಿನಿತಾ ಶೆಟ್ಟಿ, ಸಿದ್ದು ದೇವಾಡಿಗ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತೀಶ್ ಪೈ, ವ್ಯವಸ್ಥಾಪಕ ಚಂದಯ್ಯ ಶೆಟ್ಟಿ ಮೊದಲಾದವರು ಇದ್ದರು.

ho

Exit mobile version