Kundapra.com ಕುಂದಾಪ್ರ ಡಾಟ್ ಕಾಂ

ಕೊಲ್ಲೂರು ನವಶಕ್ತಿ ಮಹಿಳಾ ವೇದಿಕೆಯಿಂದ ಶಿಕ್ಷಕರಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ಇಲ್ಲಿನ ನವಶಕ್ತಿ ಮಹಿಳಾ ವೇದಿಕೆ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಹಿ.ಪ್ರಾ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರಿಗೆ ಗೌರವಿಸಲಾಯಿತು.

ತಾಲೂಕು ಪಂಚಾಯತ್ ಸದಸ್ಯೆ ಹಾಗೂ ನವಶಕ್ತಿ ಮಹಿಳಾ ವೇದಿಕೆ ಅಧ್ಯಕ್ಷೆ ಗ್ರೀಷ್ಮಾ ಗಿರಿಧರ ಭಿಡೆ ಅವರು ಪ್ರಾಸ್ತಾವಿಕ ಮಾತನಾಡಿ ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮ ದಿನವನ್ನು ನಾವು ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸುತ್ತೇವೆ. ಜೀವನದಲ್ಲಿ ಗುರಿ ಎಷ್ಟು ಮುಖ್ಯವೋ ಗುರು ಅಷ್ಟೇ ಮುಖ್ಯ ಒಂದು ದೇಶ ಅಭಿವೃದ್ಧಿ ಹೊಂದಲು ಶಿಕ್ಷಕರ ಪಾತ್ರ ಅತಿ ಮುಖ್ಯವಾಗಿರುತ್ತದೆ. ಎಂದರು.

ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ರಾಘವೇಂದ್ರ ಹಿರಿಯ ಶಿಕ್ಷಕಿ ಶ್ರೀಮತಿ ಯಶೋದ ಮತ್ತು ದೈಹಿಕ ಶಿಕ್ಷಣ ಶಿಕ್ಷಕರಾದ ವಾಸು ಮತ್ತು ನಿರ್ಮಲ ರಾಜೇಶ್ವರಿ ಉಷಾ ವೀಣಾ ಗೀತಾ ಉಪಸ್ಥಿತರಿದ್ದರು.

ನವಶಕ್ತಿ ಮಹಿಳಾ ವೇದಿಕೆಯ ಕಾರ್ಯದರ್ಶಿ ಸುಜಾತ ಅವರು ಸನ್ಮಾನ ಕಾರ್ಯಕ್ರಮ ನಡೆಸಿಕೊಟ್ಟರು. ನವಶಕ್ತಿ ಮಹಿಳಾ ವೇದಿಕೆಯ ಸದಸ್ಯೆ ಜಯಲಕ್ಷ್ಮೀ ಸ್ವಾಗತಿಸಿ ಸುಷ್ಮಾ ವಂದಿಸಿದರು.

Exit mobile version