Kundapra.com ಕುಂದಾಪ್ರ ಡಾಟ್ ಕಾಂ

ಮರವಂತೆ: ಕಡಲ್ಕೊರೆತ ಪ್ರದೇಶಕ್ಕೆ ಶ್ರೀನಿವಾಸ ಪೂಜಾರಿ ಭೇಟಿ

ಬೈಂದೂರು: ಮರವಂತೆ ಬಂದರು ಸಮೀಪದ ಕಡಲ್ಕೋರೆತ ಪ್ರದೇಶದಕ್ಕೆ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ ಸಚಿವ ಶ್ರೀನಿವಾಸ ಪೂಜಾರಿ ಭೇಟಿ ನೀಡಿ ವೀಕ್ಷಿಸಿದರು. ಬಳಿಕ ಮಾತನಾಡಿದ ಅವರು ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಮೀನುಗಾರರ ಅನುಕೂಲಕ್ಕಾಗಿ 56ಕೋಟಿ ರೂ ಅನುದಾನದಲ್ಲಿ ಬಂದರು ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿತ್ತು. ಆದರೆ ಕಳೆದ ಒಂದು ವರ್ಷದಿಂದ ಯೋಜನೆ ಮಂದಗತಿಯಲ್ಲಿ ಸಾಗುತ್ತಿದೆ.  ಸಮುದ್ರದ ಆರ್ಭಟಕ್ಕೆ ಇಲ್ಲಿನ ರಸ್ತೆಗಳು ಕೊಚ್ಚಿ ಹೋಗಿದೆ. ಈ ತಡೆಗೋಡೆಯನ್ನು ರಚಿಸಲು ಸರಕಾರಕ್ಕೆ ಮನವಿ ಸಲ್ಲಿಸುವುದಾಗಿ ತಿಳಿಸಿದರು.

Shrinivas Poojary Visited Maravanthe (5)

ಈ ಸಂದರ್ಭದಲ್ಲಿ ತಾ.ಪಂ ಸದಸ್ಯ ಮಹೇಂದ್ರ ಪೂಜಾರಿ, ಗ್ರಾಪಂ ಸದಸ್ಯರಾದ ಪ್ರಭಾಕರ ಎಂ. ಖಾರ್ವಿ, ಲೋಕೇಶ್ ಖಾರ್ವಿ, ನಾಗರಾಜ, ಸುಶೀಲ, ಶ್ರೀ ರಾಮ ಮಂದಿರ ಮೀನುಗಾರರ ಸೇವಾ ಸಮಿತಿಯ ಅಧ್ಯಕ್ಷ ಬಿ. ವೆಂಕಟರಮಣ ಖಾರ್ವಿ, ಗೌರವಾಧ್ಯಕ್ಷ ಸೋಮಯ್ಯ ಖಾರ್ವಿ, ಮಾಜಿ ಅಧ್ಯಕ್ಷ ಚಂದ್ರ ಖಾರ್ವಿ ಮೊದಲಾದವರು ಜೊತೆಗಿದ್ದರು.

Exit mobile version