Kundapra.com ಕುಂದಾಪ್ರ ಡಾಟ್ ಕಾಂ

ನೆರೆ ಸಂತ್ರಸ್ಥರಿಗೆ ಪರಿಹಾರ ನೀಡದ ಸರಕಾರ: ಕುಂದಾಪುರದಲ್ಲಿ ಕಾಂಗ್ರೆಸ್ ಪ್ರತಿಭಟನಾ ಮೆರವಣಿಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ರಾಜ್ಯದಲ್ಲಿ ಪ್ರವಾಹದಿಂದ ಹಾನಿಗೊಳಗಾದ ಜಿಲ್ಲೆಗಳಿಗೆ ಇದುವರೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಪರಿಹಾರ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಗುರುವಾರ ಕುಂದಾಪುರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಬಳಿಕ ಕುಂದಾಪುರ ತಹಶೀಲ್ದಾರರಿಗೆ ಮನವಿ ನೀಡಿ ಸರ್ಕಾರಕ್ಕೆ ಈಗೀಂದಗಲೇ ಪರಿಹಾರ ಬಿಡುಗಡೆ ಮಾಡುವಂತೆ ಸರಕಾರಕ್ಕೆ ಆಗ್ರಹಿಸಲಾಯಿತು.

ಪ್ರವಾಹದಿಂದ ಲಕ್ಷಾಂತರ ಜನಸಾಮಾನ್ಯರ ಮನೆಗಳು ಹಾಗೂ ಬದುಕು ನೆಲಕಚ್ಚಿದೆ. ಹತ್ತಾರು ಜನ ಪ್ರಾಣ ಕಳೆದುಕೊಂಡಿದ್ದಾರೆ. ಆದರೆ ಆಪರೇಶನ್ ಕಮಲಕ್ಕೆ ಸಾವಿರ ಕೋಟಿ ಖರ್ಚು ಮಾಡುವ ಬಿಜೆಪಿ ರಾಜ್ಯದಲ್ಲಿ ಹಾಗೂ ಕೇಂದ್ರದಲ್ಲಿ ಅವರದ್ದೆ ಸರ್ಕಾರ ಆಡಳಿತ ನಡೆಸುತ್ತಿದ್ದರೂ ಈ ತನಕ ಬಿಡಿಗಾಸು ಪರಿಹಾರವನ್ನು ಬಿಡುಗಡೆ ಮಾಡಿಲ್ಲ. ಚಂದ್ರಯಾನ ವಿಕ್ಷಣೆಗೆ ರಾಜ್ಯಕ್ಕೆ ಬಂದಿದ್ದ ಪ್ರದಾನಿ ಮೋದಿ ಕಾಟಾಚಾರಕ್ಕೂ ನೆರೆಪೀಡಿತ ಪ್ರದೇಶದ ವೀಕ್ಷಣೆ ಮಾಡಿಲ್ಲ. ನೆರೆಪೀಡಿತ ಪ್ರದೇಶದಲ್ಲಿ ಮಾನವೀಯ ನೆಲೆಯಲ್ಲಿ ಆಹಾರ ಸಾಮಾಗ್ರಿಗಳ ವಿತರಣೆ ಕೂಡಾ ನಡೆಯುತ್ತಿಲ್ಲ. ಪ್ರವಾಹದಿಂದ ಜೀವ ಉಳಿಸಿಕೊಳ್ಳಲು ಉಟ್ಟ ಬಟ್ಟೆಯಲ್ಲಿ ಓಡಿದ ಜನರಿಗೆ ಅಕ್ಕಿ ವಿತರಿಸಲು ಅಧಿಕಾರಿಗಳು ಆಧಾರ್ ಕಾರ್ಡ್ ಕೇಳುತ್ತಿದ್ದಾರೆ. ರಾಜ್ಯದ ಯಡಿಯೂರಪ್ಪನವರ ಸರ್ಕಾರ ಇದ್ಯಾವುದು ತನಗೆ ಸಂಬಂಧವಿಲ್ಲ ಎಂಬಂತೆ ವರ್ಗಾವಣೆ ದಂಧೆಯಲ್ಲಿ ತೊಡಗಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಪ್ರತಿಭಟನೆಯಲ್ಲಿ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಮುಖಂಡರಾದ ಮಲ್ಯಾಡಿ ಶಿವರಾಮ ಶೆಟ್ಟಿ, ಬಿ ಹಿರಿಯಣ್ಣ, ಕೆಪಿಸಿಸಿ ಐ.ಟಿ ಸೆಲ್ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಶೆಟ್ಟಿ, ನಗರ ಪ್ರಾಧಿಕಾರದ ಮಾಜಿ ಅದ್ಯಕ್ಷ ವಿಕಾಸ್ ಹೆಗ್ಡೆ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿನೋದ್ ಕ್ರಾಸ್ಟೋ, ಖಜಾಂಚಿ ಕೋಣಿ ನಾರಾಯಣ ಆಚಾರ್, ಅಟೋ ರಿಕ್ಷಾ, ಕಾರು, ಮೆಟಾಡೋರ್ ಚಾಲಕ ಮಾಲಕರ ಸಂಘದ ಅಧ್ಯಕ್ಷ ಲಕ್ಷಣ ಶೆಟ್ಟಿ, ಪುರಸಭಾ ಸದಸ್ಯರಾದ ಪ್ರಬಾವತಿ ಶೆಟ್ಟಿ, ಕೆ.ಜಿ ನಿತ್ಯಾನಂದ, ಶ್ರೀಧರ ಶೇರೆಗಾರ್, ಚಂದ್ರಶೇಖರ ಖಾರ್ವಿ, ಅಬು ಮಹಮ್ಮದ್, ಕೇಶವ ಭಟ್, ಮಹಿಳಾ ಕಾಂಗ್ರೆಸ್ ಅದ್ಯಕ್ಷೆ ಜ್ಯೋತಿ ಪುತ್ರನ್, ಯುವ ಕಾಂಗ್ರೆಸ್ ಅದ್ಯಕ್ಷ ಇಚ್ಚಿತ್ ಶೆಟ್ಟಿ, ವಕ್ವಾಡಿ ರಮೇಶ್ ಶೆಟ್ಟಿ, ಜ್ಯೋತಿ ನಾಯ್ಕ್, ಜ್ಯೋತಿ ಮೊಗವೀರ, ಆಶಾ ಕರ್ವಾಲೋ, ಕೋಡಿ ಸುನಿಲ್ ಪೂಜಾರಿ, ರೋಷನ್ ಶೆಟ್ಟಿ, ಅಣ್ಣಯ್ಯ ಪುತ್ರನ್ ಮುಂತಾದವರು ಭಾಗವಹಿಸಿದರು.

Exit mobile version