Kundapra.com ಕುಂದಾಪ್ರ ಡಾಟ್ ಕಾಂ

ಕಬಡ್ಡಿ ಪಂದ್ಯಾಟ: ಕೊಲ್ಲೂರು ಪಿಯು ಕಾಲೇಜಿನ ಮೂವರು ರಾಜ್ಯ ಮಟ್ಟಕ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಶಿರೂರು ಸರಕಾರಿ ಪದವಿ ಪೂರ್ವ ಕಾಲೇಜು ಸಂಯುಕ್ತ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಕಬಡ್ಡಿ ಪಂದ್ಯಾವಳಿಯಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದಿದ್ದು, ತಂಡದ ಮೂರು ವಿದ್ಯಾರ್ಥಿನಿಯರು ಧಾರವಾಡದಲ್ಲಿ ನಡೆಯಲಿರುವ ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.

ತಂಡದ ದಿವ್ಯ ದ್ವಿತೀಯ ವಾಣಿಜ್ಯ ವಿಭಾಗ, ದೀಪ್ತಿ ದ್ವಿತೀಯ ವಾಣಿಜ್ಯ ವಿಭಾಗ ಹಾಗೂ ಸ್ವಾತಿ ಪ್ರಥಮ ವಾಣಿಜ್ಯ ವಿಭಾಗ ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿಗೆ ಆಯ್ಕೆಯಾದವರು. ವಿದ್ಯಾರ್ಥಿನಿಯರಿಗೆ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಸುಕೇಶ್ ಶೆಟ್ಟಿ ಹೊಸಮಠ, ದೈಹಿಕ ಶಿಕ್ಷಣ ಶಿಕ್ಷಕ ಸಚಿನ್ ಕುಮಾರ್ ಶೆಟ್ಟಿ ಹುಂಚನಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದರು.

 

Exit mobile version