ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ನಾಕಟ್ಟೆಯಲ್ಲಿ ಜೀರ್ಣೋದ್ಧಾರಗೊಳ್ಳುತ್ತಿರುವ ತುಳುನಾಡಿನ ವೀರಪುರುಷರಾದ ಶ್ರೀ ಕೋಟಿ ಚೆನ್ನಯ್ಯರ ಕೊನೆಯ ಗರಡಿಗೆ ಭಾನುವಾರ ಉದ್ಯಮಿ ಗೋವಿಂದ ಬಾಬು ಪೂಜಾರಿ ಭೇಟಿನೀಡಿ ಕಟ್ಟಡ ಕಾಮಗಾರಿಗಳನ್ನು ವೀಕ್ಷಿಸಿದರು.
ನಾಕಟ್ಟೆ ಶ್ರೀ ಕೋಟಿ ಚೆನ್ನಯ್ಯ ಪಂಜುರ್ಲಿ ಗರಡಿ ಜೀಣೋದ್ಧಾರ ಸಮಿತಿ ಅಧ್ಯಕ್ಷ ಎಸ್. ರಾಜು ಪೂಜಾರಿ ಉಪಾಧ್ಯಕ್ಷ ಎಸ್. ವೆಂಕಟ ಪೂಜಾರಿ, ಶಿವರಾಮ ಪೂಜಾರಿ ಯಡ್ತರೆ, ಅಣ್ಣಪ್ಪ ಪೂಜಾರಿ ಯಡ್ತರೆ, ರಾಘವೇಂದ್ರ ಪೂಜಾರಿ ಬಿಜೂರು, ನಾಗರಾಜ ಪೂಜಾರಿ ನಾಗೂರು ಮತ್ತಿತರರು ಇದ್ದರು.

