Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ನಾಯಕತ್ವ ತರಬೇತಿ ಶಿಬಿರ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಯುವಕರು ತಮ್ಮ ವಿದ್ಯಾರ್ಥಿ ದೆಸೆಯಲ್ಲೇ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಲು ವಿಪುಲ ಅವಕಾಶಗಳಿರುತ್ತದೆ. ಆ ನಿಟ್ಟಿನಲ್ಲಿ ಉತ್ತಮ ನಾಯಕತ್ವದ ಗುಣಗಳನ್ನು ತಮ್ಮಲ್ಲಿ ಮೈಗೂಡಿಸಿಕೊಳ್ಳುವುದರ ಜೊತೆಗೆ ಕಾಲೇಜಿನಲ್ಲಿ ಲಭ್ಯವಿರುವ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ವೃತ್ತಿ ಕೌಶಲ್ಯ ಹಾಗೂ ಉತ್ತಮ ನಾಯಕತ್ವದ ಸೂಕ್ಷ್ಮತೆಗಳನ್ನು ವಿದ್ಯಾರ್ಥಿಗಳು ಅರಿತಿರಬೇಕು ಎಂದು ಕಾರ್ಕಳದ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷರಾದ ಜೇಸಿ ಚಿತ್ತರಂಜನ್ ಶೆಟ್ಟಿ ಹೇಳಿದರು.

ಅವರು ಕಾಲೇಜಿನ ವೃತ್ತಿ ಮಾರ್ಗದರ್ಶನ ಮತ್ತು ತರಬೇತಿ ಘಟಕ ಹಾಗೂ ಜೇಸಿಐ ಕುಂದಾಪುರದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ ’ನಾಯಕತ್ವ ತರಬೇತಿ ಶಿಬಿರ’ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನುದ್ಧೇಶಿಸಿ ಮಾತನಾಡಿದರು.

ಪ್ರಾಂಶುಪಾಲರಾದ ಪ್ರೊ. ಉಮೇಶ್ ಶೆಟ್ಟಿ ಕೊತ್ತಾಡಿ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ, ಜೇಸಿಐ ಸಪ್ತಾಹ ಸಭಾಪತಿ ಶ್ರೀಧರ್ ಸುವರ್ಣಾ, ಕುಂದಾಪುರದ ವಕೀಲ ಜಯಚಂದ್ರ ಶೆಟ್ಟಿ, ಜೇಸಿಐ ಕಾರ್ಯದರ್ಶಿ ಮಹೇಶ್ ಶೇಟ್, ಜೇಸಿಐ ಸದಸ್ಯ ಕಾರ್ತಿಕೇಯ ಮಧ್ಯಸ್ಥ, ವೃತ್ತಿ ಮಾರ್ಗದರ್ಶನ ಅಧಿಕಾರಿ ಮಹೇಶ್ ಬಾಬು ಉಪಸ್ಥಿತರಿದ್ದರು.

ಜೇಸಿಐ ಸ್ಥಾಪಕ ಅಧ್ಯಕ್ಷ ಹುಸೈನ್ ಹೈಕಾಡಿ ಪ್ರಾಸ್ತಾವಿಸಿದರು. ಜೇಸಿಐ ಅಧ್ಯಕ್ಷ ಪ್ರಶಾಂತ ಹವಲ್ದಾರ್ ಸ್ವಾಗತಿಸಿದರು. ವಿದ್ಯಾರ್ಥಿಗಳಾದ ನವ್ಯಾ ಅತಿಥಿಗಳನ್ನು ಪರಿಚಯಿಸಿ, ಮಹೇಶ್ ಕೊಠಾರಿ ವಂದಿಸಿ, ಹನೀನಾ ಫಾತಿಮಾ ಕಾರ್ಯಕ್ರಮ ನಿರೂಪಿಸಿದರು.

Exit mobile version