Kundapra.com ಕುಂದಾಪ್ರ ಡಾಟ್ ಕಾಂ

ಎನ್‌ಎಸ್‌ಎಸ್‌ನಿಂದ ಶಿಸ್ತು, ನಾಯಕತ್ವ ಗುಣ ರೂಢಿ: ಡಾ. ರಘು ನಾಯ್ಕ

ಕುಂದಾಪ್ರ ಡಾಟ್ ಕಾಂ ಸುದ್ದಿ
ಬ್ರಹ್ಮಾವರ: ವಿದ್ಯಾರ್ಥಿಗಳು ಎನ್.ಎಸ್.ಎಸ್ (ರಾಷ್ಟ್ರೀಯ ಸೇವಾ ಯೋಜನೆ)ಗೆ ಸೇರಿ ಶಿಸ್ತು, ಸಮಯ ಪಾಲನೆ, ವ್ಯಕ್ತಿತ್ವ ವಿಕಸನ ನಾಯಕತ್ವ ಗುಣಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ದೇಶ ಕಟ್ಟುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಬೈಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ರಘು ನಾಯ್ಕ ಹೇಳಿದರು.

ಅವರು ಇಲ್ಲಿನ ವಿದ್ಯಾಲಕ್ಷ್ಮೀ ಗ್ರೂಪ್ ಆಪ್ ಇನ್‌ಸ್ಟಿಟ್ಯೂಷನ್ ಆಡಿಯೋ ವಿಜ್ಯುವಲ್ ಹಾಲ್‌ನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕ ಉದ್ಘಾಟಿಸಿ ಮಾತನಾಡುತ್ತಿದ್ದರು.

ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಬ್ರಮಣ್ಯರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದು, ಸಂಸ್ಥೆಯ ನಿರ್ದೇಶಕರಾದ ಮಮತರವರು ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲರಾದ ರವಿಚಂದ್ರ ಪ್ರಾಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಪರಿಚಯಿಸಿದರು. ಉಪ ಪ್ರಾಂಶುಪಾಲರಾದ ಮೋಹನ್ ದಾಸ್ ಎನ್.ಎಸ್.ಎಸ್‌ನ ಅನುಭವಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು. ಎನ್.ಎಸ್.ಎಸ್ ಕಾರ್ಯಕ್ರಮ ಅಧಿಕಾರಿ ದೀಪಿಕಾ ಅತಿಥಿಗಳನ್ನು ಸ್ವಾಗತಿಸಿ, ಉಪನ್ಯಾಸಕಿ ವಾಣಿಶ್ರೀ, ಕಾರ್ಯಕ್ರಮವನ್ನು ನಿರೂಪಿಸಿ, ಗ್ರಂಥಪಾಲಕರಾದ ಉಷಾಲತಾ ವಂದಿಸಿದರು.

 

Exit mobile version