Kundapra.com ಕುಂದಾಪ್ರ ಡಾಟ್ ಕಾಂ

ಸೆ.27: ಕೌಶಲ್ಯ- ಉದ್ಯೋಗ ಅಭಿವೃದ್ಧಿ ಶಿಬಿರ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಂii ಇಲಾಖೆ ಬೆಂಗಳೂರು ಮತ್ತು ಸಿಡಾಕ್ ಧಾರವಾಡ ಇವರ ಜಂಟಿ ಆಶ್ರಯದಲ್ಲಿ ಸ್ವಉದ್ಯೋಗಾಂಕ್ಷಿಗಳಿಗೆ ಉಚಿತ ಉದ್ಯೋಗ ಅಭಿವೃದ್ಧಿ ತರಬೇತಿ ಶಿಬಿರವನ್ನು ಸೆಪ್ಟಂಬರ್ 27 ಮತ್ತು 28 ರಂದು ಉಡುಪಿಯಲ್ಲಿ ಏರ್ಪಡಿಸಲಾಗಿದೆ.

ಸರಕಾರದ ವಿವಿಧ ಇಲಾಖೆಗಳಲ್ಲಿ ಸ್ವಯಂ ಉದ್ಯೋಗಕ್ಕಾಗಿ ಈಗಾಗಲೇ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರಥಮ ಪ್ರಾಶಸ್ತ್ಯವಿದ್ದು, ಸ್ವಉದ್ಯೋಗಾಂಕ್ಷಿಗಳಿಗೆ ಶಿಬಿರದಲ್ಲಿ ಭಾಗವಹಿಸಲು ಅವಕಾಶವಿದೆ. ಈ ಶಿಬಿರದಲ್ಲಿ ಸ್ವಂತ ಉದ್ಯೋಗಕ್ಕೆ ಬೇಕಾಗುವ ನಾಯಕತ್ವದ ಗುಣಗಳು, ಸರಕಾರಿ ಹಾಗೂ ರಾಷ್ಟ್ರೀಕೃತ ಬ್ಯಾಂಕ್‌ಗಳ ವಿವಿಧ ಯೋಜನೆಗಳು, ಸಣ್ಣ ಮತ್ತು ಮದ್ಯಮ ಉದ್ದಿಮೆಗಳಿಗೆ ವಿವಿಧ ಕ್ಷೇತ್ರಗಳಲ್ಲಿರುವ ಅವಕಾಶಗಳು, ಜಿ.ಎಸ್.ಟಿ., ಯೋಜನಾ ವರದಿ ತಯಾರಿಕೆ, ಲೆಕ್ಕಪತ್ರ ನಿರ್ವಹಣೆ ಇತ್ಯಾದಿ ವಿಚಾರಗಳಲ್ಲಿ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಸಮಗ್ರ ಮಾಹಿತಿ ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರ, ಅಲೆವೂರು ರಸ್ತೆ, ಶಿವಳ್ಳಿ ಕೈಗಾರಿಕಾ ವಸಾಹತು, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 9483120937 / 8217530146 ನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Exit mobile version