Site icon Kundapra.com ಕುಂದಾಪ್ರ ಡಾಟ್ ಕಾಂ

ಅಲಂಕಾರಿಕ ಮೀನು ಸಾಕಣಿಕೆಗೆ ಸಚಿವ ಕೋಟ ಚಾಲನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಡಾ ಶಿವರಾಮ ಕಾರಂತ ಥೀಮ್ ಪಾರ್ಕ್ ನಲ್ಲಿರುವ ಕೆರೆಗೆ ಅಲಂಕಾರಿಕ ಮೀನು ಸಾಕಣಕೆಗೆ ಮೀನುಕಾರಿಕೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಸೆ.೨೫ ರಂದು ಮೀನುಗಳನ್ನು ಬಿಡುವುದರ ಮೂಲಕ ಚಾಲನೆ ನೀಡಿದರು.

ಬಳಿಕ ಮಾತನಾಡಿ ಪ್ರವಾಸಿ ಸ್ಥಳದ ಕೆರೆಗಳಿಗೆ ಅಲಂಕಾರಿಕ ಮೀನುಗಳನ್ನು ಸಾಕಣಿಕೆ ಮಾಡುವುದರಿಂದ ಪ್ರವಾಸಿಗರನ್ನು ಆಕರ್ಷಿಸುತ್ತದೆ,ಮುಂದಿನ ದಿನಗಳಲ್ಲಿ ಪ್ರವಾಸಿ ತಾಣದ ಕೆರೆ,ದೇಸ್ಥಾನದ ಕೆರೆಗಳಿಗೆ ಅಲಂಕಾರಿಕ ಮೀನು ಬಿಡುವ ಯೋಜನೆ ರೂಪಿಸಲಾಗುವುದೆಂದು ಸಚಿವರು ಈ ಸಂದರ್ಭದಲ್ಲಿ ತಿಳಿಸಿದರು.

ಇಲಾಖೆಯ ಉಪ ನಿರ್ದೇಕ ಗಣೇಶ್ ಮೀನು ಸಾಕಣಕೆಯ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಇಲಾಖೆಯ ಮುಖ್ಯಸ್ಥ ಶಿವಕುಮಾರ್, ಕಿರಣ್, ಚಂದ್ರಶೇಖರ್, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ರಘು ತಿಂಗಳಾಯ, ಪಿ.ಡಿ.ಓ ಶೈಲಾ ಎಸ್ ಪೂಜಾರಿ, ಕಾರಂತ ಪ್ರತಿಷ್ಥಾನದ ಟ್ರಸ್ಟಿ ಸುಬ್ರಾಯ್ ಆಚಾರ್ಯ, ಹಾಗೂ ಕಾರಂತ ಥೀಮ್ ಪಾರ್ಕ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Exit mobile version