ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ನೇತೃತ್ವದಲ್ಲಿ ನಡೆದ ಪ್ರಸಕ್ತ ಬ್ಯಾಂಕುಗಳ ಸನ್ನಿವೇಶ ಎನ್ನುವ ಉಪನ್ಯಾಸ ಕಾರ್ಯಕ್ರಮದಲ್ಲಿ ಪ್ರಸ್ತುತ ಬ್ಯಾಂಕಿನ ವ್ಯವಹಾರದ ಬಗ್ಗೆ ಅಗತ್ಯ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ನೀಡುತ್ತಾ, ಬ್ಯಾಂಕುಗಳ ಸ್ಥಾಪನೆ, ಅದರ ಕಾರ್ಯನಿರ್ವಹಣೆ, ಇತ್ತೀಚೆಗೆ ಸರ್ಕಾರಿ ಬ್ಯಾಂಕುಗಳ ವಿಲೀನಗೊಳಿಸಿದ್ದರ ಬಗ್ಗೆ ಅಭಿಪ್ರಾಯವನ್ನು ರಕ್ಷಕ – ಶಿಕ್ಷಕ ಸಂಘದ ಅಧ್ಯಕ್ಷರಾದ ನಿವೃತ್ತ ಬ್ಯಾಂಕ್ ಅಧಿಕಾರಿ ಕೆ. ವೆಂಕಟರಮಣ ಹೆಗ್ಡೆ ವ್ಯಕ್ತಪಡಿಸಿದರು.
ಕಾಲೇಜಿನ ಪ್ರಾಂಶುಪಾಲ ಪ್ರೊ. ಕೊತ್ತಾಡಿ ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ವಾಣಿಜ್ಯ ವಿಭಾಗದ ಮುಖ್ಯಸ್ಥ ರಾಜೇಶ್ ಶೆಟ್ಟಿ ಉಪಸ್ಥಿತರಿದ್ದರು.
ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಸುಧಾಕರ್ ಪಿ. ಸ್ವಾಗತಿಸಿದರು. ವಿದ್ಯಾರ್ಥಿನಿ ಸುಜಾತ ಖಾರ್ವಿ ಪ್ರಾರ್ಥಿಸಿ, ಆಯಿಷಾ ನಮಿರಾ ಅತಿಥಿಗಳನ್ನು ಪರಿಚಯಿಸಿ, ಮೆಲಿಟಾ ಲೋಬೋ ಕಾರ್ಯಕ್ರಮ ನಿರ್ವಹಿಸಿದರು. ಅರ್ಥಶಾಸ್ತ್ರ ಉಪನ್ಯಾಸಕಿ ಜ್ಯೋತಿ ಮೊಗವೀರ ವಂದಿಸಿದರು.