Site icon Kundapra.com ಕುಂದಾಪ್ರ ಡಾಟ್ ಕಾಂ

ಗುಜ್ಜಾಡಿ ಸರಕಾರಿ ಪ್ರಾಥಮಿಕ ಶಾಲಾ ಕಟ್ಟಡ ನಿರ್ಮಾಣಕ್ಕೆ ಗುದ್ದಲಿ ಪೂಜೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಡಬೇಕಾದುದು ಸರಕಾರದ ಕರ್ತವ್ಯ. ಶಾಲಾ ಕೊಠಡಿಗಳಿಲ್ಲದ ಶಾಲೆಗಳಿಗೆ ಸರಕಾರದ ವಿವಿಧ ಯೋಜನೆಗಳ ಮೂಲಕ ಅನುದಾನ ಒದಗಿಸಿ ಶಾಲಾ ಕೊಠಡಿಗಳನ್ನು ನಿರ್ಮಿಸಲು ಕ್ರಮಕೈಗೊಳ್ಳಲಾಗಿದೆ. ಶತಮಾನೋತ್ಸವ ಆಚರಿಸಿಕೊಳ್ಳುತ್ತಿರುವ ಗುಜ್ಜಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿಗಳು ಶಿಥಿಲಾವಸ್ಥೆಯಲ್ಲಿರುವುದರಿಂದ ನೂತನ ತರಗತಿ ಕೋಣೆ ನಿರ್ಮಿಸಲು ಅನುದಾನ ಒದಗಿಸಲಾಗಿದ್ದು, ಶಾಲಾ ಕಟ್ಟಡದ ದುರಸ್ಥಿಗೂ ಅನುದಾನ ನೀಡಲಾಗುವುದು ಎಂದು ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಹೇಳಿದರು.

ಗುಜ್ಜಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ನಾಟಕ ಸರಕಾರದ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಯೋಜನೆಯಡಿ ಸುಮಾರು ೨೦ ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ತರಗತಿ ಕೋಣೆಗಳಿಗೆ ಬುಧವಾರ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ಈಲ್ಲಾ ಪಂಚಾಯತ್ ಸದಸ್ಯೆ ಶೋಭಾ ಜಿ.ಪುತ್ರನ್, ತಾಲೂಕು ಪಂಚಾಯತ್ ಸದಸ್ಯರಾದ ನಾರಾಯಣ ಕೆ.ಗುಜ್ಜಾಡಿ, ರಾಜು ದೇವಾಡಿಗ, ಶಾಲಾ ಶತಮಾನೋತ್ಸವ ಸಮಿತಿ ಅಧ್ಯಕ್ಷ ಉಮೇಶ ಮೇಸ್ತ, ಗುಜ್ಜಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ತಮ್ಮಯ್ಯ ದೇವಾಡಿಗ, ಮಾಜಿ ಅಧ್ಯಕ್ಷ ಹರೀಶ ಮೇಸ್ತ, ರಾಜು ಶ್ರೀಯಾನ್, ಶೇಖರ ದೇವಾಡಿಗ, ಗುಜ್ಜಾಡಿ ಗ್ರಾಪಂ ಸದಸ್ಯರು, ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಶತಮಾನೋತ್ಸವ ಸಮಿತಿ ಪದಾಧಿಕಾರಿಗಳು, ಶಿಕ್ಷಕರು, ಪೋಷಕರು ಮತ್ತಿತರರು ಉಪಸ್ಥಿತರಿದ್ದರು.

ಶಾಲೆಯ ಮುಖ್ಯೋಪಾಧ್ಯಾಯ ಆನಂದ ಜಿ. ಸ್ವಾಗತಿಸಿದರು. ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ರಾಮನಾಥ ಚಿತ್ತಾಲ್ ವಂದಿಸಿದರು.

Exit mobile version