ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಉಡುಪಿ ಜಿಲ್ಲಾ ಸಮಿತಿ ಮತ್ತು ಮನೆ,ನಿವೇಶನ ರಹಿತರ ಹೋರಾಟ ಸಮಿತಿಯ ಆಶ್ರಯದಲ್ಲಿ ಉಡುಪಿ ಜಿಲ್ಲೆಯಾದ್ಯಂತ ಸರಕಾರದಿಂದ ಸಮೀಕ್ಷೆಯಲ್ಲಿ ಆಯ್ಕೆಗೊಂಡ ಅರ್ಹ ಬಡ ನಿವೇಶನ ರಹಿತ ಫಲಾನುಭವಿಗಳಿಗೆ ಭೂಮಿ ಮಂಜೂರು ಮಾಡಲು ಸರಕಾರಿ / ಖಾಸಗೀ ಜಾಗ ಗುರುತಿಸಬೇಕೆಂದು ಒತ್ತಾಯಿಸಿ 18, ನವಂಬರ್ 2019 ಸೋಮವಾರದಿಂದ ಅನಿರ್ಧಿಪ್ಟಾವಧಿ ಉಡುಪಿ ಮಣಿಪಾಲ ಜಿಲ್ಲಾಧಿಕಾರಿ ಕಛೇರಿಗೆ ಎದುರು ಜರಗುವ ನಿವೇಶನ ರಹಿತರ ಭೂಮಿ ಹಕ್ಕಿನ ನಿಣಾ೯ಯಕಹೋರಾಟವನ್ನು ಯಶಸ್ವಿಗೊಳಿಸಬೇಕು ಎಂದು ಕನಾ೯ಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ ಕೋಣಿ ಕರೆ ನೀಡಿದರು.
ಬೈಂದೂರು ಸಿಐಟಿಯು ಕಚೇರಿ ಸಭಾಂಗಣದಲ್ಲಿ ಜರಗಿದ ಬೈಂದೂರು, ತಗ್ಗಸೆ೯ಪಡುವರಿ, ಯಡ್ತರೆ ಗ್ರಾಮಗಳ ನಿವೇಶನ ರಹಿತರ ಬೃಹತ್ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. ನಿವೇಶನ ರಹಿತರ ಕೈಗೆ ಭೂಮಿ ಹಕ್ಕು ಪತ್ರ ಸಿಗುವ ತನಕ ಈ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಸಮಾವೇಶದಲ್ಲಿ ಒಮ್ಮತದ ತೀರ್ಮಾನ ಮಾಡಲಾಯಿತು. ಮುಖಂಡರಾದ ಮಂಜು ಪಡವರಿ, ರೊನಾಲ್ಡ್ ರಾಜೇಶ್ ಕ್ವಾಡ್ರಸ್, ಅಮ್ಮಯ್ಯ ಪೂಜಾರಿ, ರಾಘವೇಂದ್ರ ಉಪ್ಪುಂದ, ರೋನಿ ನಜರತ್, ಜಯಶ್ರೀ ಪಡುವರಿ, ಶೀಲಾವತಿ, ನಾಗರತ್ನ ನಾಡ, ರಾಜೀವ ಪಡುಕೋಣೆ ಉಪಸ್ಥಿತರಿದ್ದರು.